ಗಲ್ಫ್ ಕನ್ನಡಿಗರ ಒಕ್ಕೂಟದ ಬೇಡಿಕೆಗಳ ಕುರಿತು ಅಧಿವೇಶನದಲ್ಲಿ ಚರ್ಚೆ

ಮಂಗಳೂರು ಫೆ.21(ಉಡುಪಿ ಟೈಮ್ಸ್ ವರದಿ): ಅನಿವಾಸಿ ಕನ್ನಡಿಗರಿಗೆ ತಮ್ಮ ನಾಡು ನುಡಿಯ ಬಗ್ಗೆ ಇರುವ ಅಪರಿಮಿತವಾದ ಅಭಿಮಾನದ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆ ನಡೆದಿದೆ.

ಅನಿವಾಸಿ ಕನ್ನಡಿಗರ ಬೇಡಿಕೆಗಳ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಿದ ಸಭಾಪತಿ ಯುಟಿ ಖಾದರ್ ಅವರು ಅನಿವಾಸಿಗಳ ಬಗ್ಗೆ ಮತ್ತು ಅವರಿಗೆ ನಾಡು ನುಡಿ ಬಗೆಗಿರುವ ಅಪರಿಮಿತ ಅಭಿಮಾನದ ಕುರಿತು ಹೊಗಳಿದ್ದಾರೆ.

ಈ ವೇಳೆ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ, ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಚುರ ಪಡಿಸಿದಂತೆ ಈಗಾಗಲೇ ಎನ್‍ಆರ್‍ಐ ಸಮಿತಿಯ ಉಪಾಧ್ಯಕ್ಷ ಡಾ. ಆರತಿ ಕೃಷ್ಣರವರನ್ನು ನೇಮಕ ಮಾಡಿದ್ದೇವೆ, ಮುಂದೆ ಕೇರಳದ ಮಾದರಿಯಂತೆ ಎನ್‍ಆರ್‍ಐ ಸಚಿವಾಲಯವನ್ನು ಸ್ಥಾಪಿಸುವ ಭರವಸೆ ನೀಡಿದರು.

ಅಧಿವೇಶನದ ಚರ್ಚೆಗೂ ಮೊದಲು, ಗಲ್ಫ್ ಕನ್ನಡಿಗರ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭಾಪತಿ ಯು.ಟಿ.ಖಾದರ್ ಮತ್ತು ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಗಲ್ಫ್ ಕನ್ನಡಿಗರು ಹಲವಾರು ಸಮಸ್ಯೆಗಳನ್ನ ಎದುರಿಸುತಿದ್ದು ಅವುಗಳ ಪರಿಹಾರಕ್ಕೆ ಎನ್‍ಆರ್‍ಐ ಸಚಿವಾಲಯದ ಅಗತ್ಯವಿದೆ ಎಂದು ಸೂಚಿಸಲಾಯಿತು. ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೀ ಅನಿವಾಸಿಗಳ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಪ್ರತ್ಯೇಕ ಸಚಿವಾಲಯ ಪ್ರಾರಂಭಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಕೊಲ್ಲಿ ರಾಷ್ಟ್ರಗಳಾದ ಯುಎಇ, ಕುವೈತ್, ಕತಾರ್, ಒಮಾನ್, ಬಹರೇನ್ ಮತ್ತು ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರು ರಚಿಸಿಕೊಂಡಿರುವ ಗಲ್ಫ್ ಕನ್ನಡಿಗರ ಒಕ್ಕೂಟದ ಅಧ್ಯಕ್ಷರಾದ ಇಬ್ರಾಹಿಂ ಖಲೀಲ್, ಉಪಾಧ್ಯಕ್ಷರುಗಳಾದ, ರಮಾನಂದ ಪ್ರಭು, ಇಬ್ರಾಹಿಂ ಹುಸೇನ್ ಅವರು ಈ ಸಂಧರ್ಭದಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!