ಮುಖ್ಯಮಂತ್ರಿ ಹಾಗೂ ಸಚಿವ ಈಶ್ವರಪ್ಪ ಅವರ ನಡುವಿನ ಭಿನ್ನಾಭಿಪ್ರಾಯ ಎರಡು ದಿನಗಳಲ್ಲಿ ಶಮನ: ನಳಿನ್ ಕುಮಾರ್

ಮಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಸಚಿವ ಕೆ.ಎಸ್ ಈಶ್ವರಪ್ಪ ಅವರ ನಡುವಿನ ಭಿನ್ನಾಭಿಪ್ರಾಯ ಎರಡು ದಿನಗಳಲ್ಲಿ ಶಮನಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ಇಂದು ಮಂಗಳೂರಿನ ಖಾಸಗಿ ಹೊಟೇಲ್‍ವೊಂದರಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು. ಈ ಸಮಸ್ಯೆ ಕುರಿತಂತೆ ಈಶ್ವರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಈಶ್ವರಪ್ಪ ಅವರನ್ನು ಭೇಟಿಯಾಗಿ ನಾನು ಈ ಭಿನ್ನಾಭಿಪ್ರಾಯಗಳನ್ನು ಪರಿಹರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಬಿಜೆಪಿಯಲ್ಲಿ ಉಂಟಾಗಿರುವ ವೈಮನಸ್ಸಿಗೆ ಸಂಬಂಧಿಸಿದ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಅವರು, “ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭ ರಾಹುಲ್ ಗಾಂಧಿ ಅವರು ತಮ್ಮದೇ ಸರ್ಕಾರದ ಸುಗ್ರೀವಾಜ್ಞೆಯ ಪ್ರತಿಯನ್ನು ಹರಿದು ಹಾಕಿದ್ದಕ್ಕಿಂತ ದೊಡ್ಡ ಅವಮಾನ ಇದಲ್ಲ ಎನ್ನುವುದನ್ನು ತಿಳಿದುಕೊಳ್ಳಬೇಕು” ಎಂದರು.
ಇದೇ ವೇಳೆ ಉಪಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರಗಳಾದ ಬೆಳಗಾಂ, ಮಸ್ಕಿ ಹಾಗೂ ಬಸವಕಲ್ಯಾಣದಲ್ಲಿ ಜಯಗಳಿಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಿದ್ದಕ್ಕಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ  ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈ ವಿಚಾರ ಸಿಎಂ ಬಿಎಸ್ ವೈ ಹಾಗೂ ಸಚಿವ ಈಶ್ವರಪ್ಪ ಅವರ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿತ್ತು. 

Leave a Reply

Your email address will not be published. Required fields are marked *

error: Content is protected !!