ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಯ ಚಿತ್ರ ‘ಸಪ್ತ ಸಾಗರದಾಚೆ ಎಲ್ಲೋ’ ಪೋಸ್ಟರ್ ರಿಲೀಸ್

ಹೊಸ ಗೆಟಪ್‍ನಲ್ಲಿ ಸಪ್ತ ಸಾಗರದಾಚೆ ಹೊರಟಿದ್ದಾರೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ. 777 ಚಾರ್ಲಿ ಚಿತ್ರದ ಬಳಿಕ ರಕ್ಷಿತ್ ಶೆಟ್ಟಿ ಒಪ್ಪಿಕೊಂಡಿರುವ ಹೊಸ ಚಿತ್ರ ಸಪ್ತ ಸಾಗರದಾಚೆ ಎಲ್ಲೋ.

ಇದೀಗ ಚಿತ್ರ ತಂಡ ಶಿವರಾತ್ರಿ ಪ್ರಯುಕ್ತ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ್ದು, ಗಡ್ಡದಾರಿಯಾಗಿ ನೋವಿನಲ್ಲಿರುವ ರಕ್ಷಿತ್ ಶೆಟ್ಟಿ ಲುಕ್ ಅಭಿಮಾನಿಗಳ ಮನ ಗೆದ್ದಿದೆ. ಪರಂವಃ ಪಿಕ್ಚರ್ಸ್ ನಲ್ಲಿ  ಹೇಮಂತ್ ರಾವ್ ಸಾರಥ್ಯದಲ್ಲಿ ಮೂಡಿಬರುತ್ತಿದೆ ಸಪ್ತ ಸಾಗರದಾಚೆ ಎಲ್ಲೋ ಚಿತ್ರ. ಬೀರ್ ಬಲ್ ನಟಿಸಿದ್ದ ರುಕ್ಮಿಣಿ ವಸಂತ್ ಇಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ನಾಯಕಿಯಾಗಿ ಸಾಥ್ ನೀಡಿದ್ದಾರೆ.

ರಕ್ಷಿತ್ ಶೆಟ್ಟಿ ಅವರ ಹೊಸ ಲುಕ್ ಅಭಿಮಾನಿಗಳಿಂದ ಮೆಚ್ಚುಗೆ ಪಡೆದುಕೊಂಡಿದ್ದು ಚಿತ್ರದ ಬಗ್ಗೆ ಕುತೂಹಲ ಸೃಷ್ಟಿಸಿದೆ. 

Leave a Reply

Your email address will not be published.

error: Content is protected !!