ಉಡುಪಿ: ಗಾಂಜಾ ಸೇವನೆ- ಓರ್ವ ಯುವಕನ ವಿರುದ್ಧ ದೂರು
ಉಡುಪಿ ಮಾ.7(ಉಡುಪಿ ಟೈಮ್ಸ್): ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಯುವಕನ ವಿರುದ್ಧ ಸೆನ್ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಸಂತೆಕಟ್ಟೆ ಬಸ್ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತುವನ್ನು ಸೇವಿಸಿರುವಂತೆ ಕಂಡು ಮನೀಶ್ (21) ಎಂಬಾತನನ್ನು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಗೆ ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ವೈದ್ಯರ ಬಳಿ ಹಾಜರು ಪಡಿಸಿದ್ದರು. ಈತನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ಧೃಡಪಟ್ಟ ಕಾರಣ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.