ಉಡುಪಿ: ಡಿ.13 ರಿಂದ 15 ತುಳು ಶಿವಳ್ಳಿ ಬ್ರಾಹ್ಮಣರ ವಿಶ್ವ ಸಮ್ಮೇಳನ
ಉಡುಪಿ: ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಇದೇ 13ರಿಂದ 15ರವರೆಗೆ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ ನಡೆಯಲಿದೆ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳು ತಿಳಿಸಿದರು. ಮಧ್ವಮಂಟಪದಲ್ಲಿ ಸುದ್ದಿಗೋಷ್ಠಿ ನಡೆಸಿದ ಸ್ವಾಮೀಜಿ, ದೇಶ ವಿದೇಶಗಳಲ್ಲಿ ನೆಲೆಸಿರುವ ಶಿವಳ್ಳಿ ತುಳು ಬ್ರಾಹ್ಮಣರು ಸಮಾವೇಶ ದಲ್ಲಿ ಭಾಗವಹಿಸಬೇಕು. ಸಮಾಜವನ್ನು ಸಂಘಟಿಸಲು ಹಾಗೂ ಲೋಪ ದೋಷಗಳನ್ನು ತಿದ್ದಿಕೊಳ್ಳಲು ಸಮ್ಮೇಳನ ವೇದಿಕೆಯಾಗಲಿದೆ ಎಂದರು. 13ರಂದು ಸಂಜೆ 6.45ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾ ಟನೆ ನಡೆಯಲಿದೆ. ಭೀಮನಕಟ್ಟೆ ಮಠದ ರಘುವರೇಂದ್ರ ಶ್ರೀಗಳು, ಪಲಿಮಾರು ಕಿರಿಯ ಯತಿ ವಿದ್ಯಾರಾಜೇಶ್ವರ ಸ್ವಾಮೀಜಿ, ಶಾಸಕ ರಘುಪತಿ ಭಟ್, ಉದ್ಯಮಿ ರಾಮದಾಸ್ ಮಡಮಣ್ಣಾಯ ಉಪಸ್ಥಿತರಿರಲಿದ್ದಾರೆ. 14ರಂದು ಬೆಳಿಗ್ಗೆ 8ಕ್ಕೆ ಲಕ್ಷ್ಮೀ ಸೋಬಾನೆ, 9ಕ್ಕೆ ಸಂಸ್ಕೃತ ಮಹಾ ಪಾಠಶಾಲೆಯಿಂದ ರಾಜಾಂಗಣದವರೆಗೆ ಮೆರವಣಿಗೆ ಹಾಗೂ ಬೆಳಿಗ್ಗೆ 10ಕ್ಕೆ ವಿಶ್ವ ಸಮ್ಮೇಳನ ಉದ್ಘಾಟನೆಯಾಗಲಿದೆ ಎಂದು ಶ್ರೀಗಳು ತಿಳಿಸಿದರು. ಅಂದಿನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವೇಶ ತೀರ್ಥರು ಅಧ್ಯಕ್ಷತೆ ವಹಿಸಲಿದ್ದಾರೆ. ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರು, ಅದಮಾರು ವಿಶ್ವಪ್ರಿಯ ತೀರ್ಥರು, ಪೇಜಾವರ ಮಠದ ಕಿರಿಯ ವಿಶ್ವಪ್ರಸನ್ನ ತೀರ್ಥರು, ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥರು, ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥರು, ಪಲಿಮಾರು ಮಠದ ಕಿರಿಯ ವಿದ್ಯಾರಾಜೇಶ್ವರ ತೀರ್ಥರು ಆಶೀರ್ವಚನ ನೀಡಲಿದ್ದಾರೆ ಎಂದು ಹೇಳಿದರು.ReplyForward |