ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ
ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಶಾಸಕರಾದ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಜನಸಾಮಾನ್ಯರ ಬಾಕಿ ಇರುವ ಕಡತಗಳ ಬಗ್ಗೆ ಮಾಹಿತಿ ಪಡೆದು ತ್ವರಿತ ವಿಲೇವಾರಿ ನಡೆಸುವಂತೆ ಸೂಚನೆ ನೀಡಿದರು.
ಪ್ರಾಧಿಕಾರದ ಅನುದಾನದಿಂದ ನಡೆದಿರುವ ಕೆರೆ ಹಾಗೂ ಪಾರ್ಕ್ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಹಾಗೂ ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರ ಆರಂಭಿಸುವ ಬಗ್ಗೆ ಚರ್ಚೆ ನಡೆಸಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾದ ಮಹೇಶ್ ಚಂದ್ರ, ನಿಕಟಪೂರ್ವ ಅಧ್ಯಕ್ಷರಾದ ಮನೋಹರ ಕಲ್ಮಾಡಿ, ನಗರ ಸಭಾ ಸದಸ್ಯರುಗಳಾದ ಪ್ರಭಾಕರ ಪೂಜಾರಿ, ಹರೀಶ್ ಶೆಟ್ಟಿ, ಗಿರಿಧರ ಆಚಾರ್ಯ ಉಪಸ್ಥಿತರಿದ್ದರು.