ಉಡುಪಿ: ನಳಿನ್ ಕುಮಾರ್ ಹೇಳಿಕೆ ಸತ್ಯಕ್ಕೆ ದೂರವಾಯಿತು
ಉಡುಪಿ: ಇತ್ತೀಚಿಗೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧ್ಯಕ್ಷರ ನೇಮಕಾತಿ ಆಗಲಿಲ್ಲ ಎಂದು ಟೀಕಿಸಿದ ನಳಿನ್ ಕುಮಾರ್ ಕಟೀಲ್ರವರು ತನ್ನ ಭಾಷಣವನ್ನು ಮುಂದುವರಿಸುತ್ತಾ ಡಿ.ಕೆ. ಶಿವ ಕುಮಾರ್ ಆದರೆ ಸಿದ್ಧರಾಮಯ್ಯ ಹೊಗ್ತಾರೆ, ಸಿದ್ಧರಾಮಯ್ಯ ಆದರೆ ಪರಮೇಶ್ವರ್ ಹೋಗ್ತಾರೆ ಅಂತು ಪಕ್ಷಕ್ಕೆ ಶಕ್ತಿ ಇಲ್ಲದಂತಾಗಿದೆ ಎಂದು ಹೇಳಿದ ಕಟೀಲ್ರವರ ಮಾತು ಸತ್ಯಕ್ಕೆ ದೂರವಾಗುವುದರಲ್ಲಿ ಸಂದೇಹವಿಲ್ಲ.
ರಾಜ್ಯದ ಪ್ರತಿಯೊಬ್ಬ ನಾಯಕರೂ ಪಕ್ಷವನ್ನು ಸದೃಡವಾಗಿ ಬೆಳೆಸಿಕೊಂಡು ಮುನ್ನಡೆಸಲಿದ್ದಾರೆ ಎನ್ನುವುದರಲ್ಲಿ ಸಂಶಯವಿಲ್ಲ. ನಮ್ಮ ಜಿಲ್ಲೆಯಲ್ಲಿ ಡಿ.ಕೆ. ಶಿವಕುಮಾರ್ರವರನ್ನು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಪಕ್ಷದ ತೀರ್ಮಾನ ಸ್ವಾಗತಾರ್ಹ ಎಂದು ಜಿಲ್ಲೆಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ, ಅಲೆವೂರು ಹರೀಶ್ ಕಿಣಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಮುಖಂಡ ದಿವಾಕರ್ ಕುಂದರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಮೊದಲಾದವರು ಡಿ.ಕೆ.ಶಿಯವರನ್ನು ಅಭಿನಂದಿಸಿ ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸಿದ್ದಾರೆ.