ಕಥೊಲಿಕ್ ಸಭಾ ಉದ್ಯಾವರ : ವೈದ್ಯಕೀಯ ತಪಾಸಣಾ ಶಿಬಿರ
ಉಡುಪಿ : ಕಥೋಲಿಕ್ ಸಭಾ ಉದ್ಯಾವರ ಘಟಕ ಮತ್ತು ಆರೋಗ್ಯ ಆಯೋಗ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯ ಉದ್ಯಾವರ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಭಾಗಿತ್ವದಲ್ಲಿ ಉಚಿತ ಹೃದಯ, ನೇತ್ರ ಮತ್ತು ಮಧುಮೇಹ ರೋಗ ತಪಾಸಣಾ ಶಿಬಿರವು ಆದಿತ್ಯವಾರ ಝೇವಿಯರ್ ಸಭಾಭವನ ಉದ್ಯಾವರ ಇಲ್ಲಿ ನಡೆಯಿತು.
ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಕುಲಪತಿ ಮತ್ತು ಸಂತ ಫ್ರಾನ್ಸಿಸ್ ಜೇವಿಯರ್ ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾ. ಸ್ಟ್ಯಾನಿ ಬಿ. ಲೋಬೊ ಕಾರ್ಯಕ್ರಮವನ್ನು ಉದ್ಘಾಟಿಸಿ, ಜನರ ಆರೋಗ್ಯದ ಬಗ್ಗೆ ಜಾಗೃತಿ ವಹಿಸುತ್ತಿರುವ ಕಥೋಲಿಕ್ ಸಭಾದ ಕೆಲಸಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಕಸ್ತೂರ್ಬಾ ಆಸ್ಪತ್ರೆಯ ಸಹಾಯಕ ಪ್ರೊಫೆಸರ್ ಡಾ. ವನಿತಾ ಶೆಟ್ಟಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಎಲ್ಲರೂ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಸಹಾಯಕ ಧರ್ಮಗುರು ವಂದನೀಯ ಫಾ. ರಾಲ್ವಿನ್ ಅರಾನ್ನ, ಆರೋಗ್ಯ ಆಯೋಗದ ಸಂಚಾಲಕ ಆರ್ ಪಿ ಮೋನಿಸ್, ಪಾಲನಾ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೊರೋನ್ನ, ಕಾರ್ಯದರ್ಶಿ ಮೈಕಲ್ ಡಿಸೋಜಾ ಉಪಸ್ಥಿತರಿದ್ದರು.
ಕಥೋಲಿಕ್ ಸಭಾ ಅಧ್ಯಕ್ಷ ಲಾರೆನ್ಸ್ ಡೆಸಾ ಸ್ವಾಗತಿಸಿದರೆ, ಗಾಡ್ಫ್ರೀ ಡಿಸೋಜ ಧನ್ಯವಾದ ಸಮರ್ಪಿಸಿದರು. ಕಾರ್ಯದರ್ಶಿ ಆಲ್ವಿನ್ ಅಂದ್ರಾದೆ ಕಾರ್ಯಕ್ರಮ ನಿರೂಪಿಸಿದರು. 250ಕ್ಕೂ ಅಧಿಕ ಸಾರ್ವಜನಿಕರು ಶಿಬಿರದಲ್ಲಿ ಪಾಲ್ಗೊಂಡು ತಪಾಸಣೆ ಮತ್ತು ಸಲಹೆಯನ್ನು ಪಡೆದುಕೊಂಡರು