ಕಾಶ್ಮೀರ: ಸೇನಾ ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ, 3 ಯೋಧರು ಹುತಾತ್ಮ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಸೇನಾ ವಾಹನದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ಯೋಧರು ಹುತಾತ್ಮರಾಗಿದ್ದಾರೆ ಮತ್ತು ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಠಾಣಮಂಡಿ-ಸುರನಕೋಟೆ ರಸ್ತೆಯ ಸಾವನಿ ಪ್ರದೇಶದಲ್ಲಿ ಹೊಂಚು ಹಾಕಿ ಕುಳಿತಿದ್ದ ಉಗ್ರರು, ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಬುಫ್ಲಿಯಾಜ್ನಲ್ಲಿ ಬುಧವಾರದಿಂದ ಭಯೋತ್ಪಾದಕರ ವಿರುದ್ಧ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದ್ದು, ಅಲ್ಲಿಗೆ ಯೋಧರನ್ನು ಹೊತ್ತೊಯ್ಯುತ್ತಿದ್ದ ವಾಹನ ಮೇಲೆ ಇಂದು ಉಗ್ರರು ದಾಳಿ ನಡೆಸಿದ್ದಾರೆ.
ಭಯೋತ್ಪಾದಕರು ಸೇನಾ ವಾಹನದ ಮೇಲೆ ಗುಂಡು ಹಾರಿಸಿದ್ದು, ಕನಿಷ್ಠ 3 ಯೋಧರು ಹುತಾತ್ಮರಾಗಿದ್ದಾರೆ ಮತ್ತು ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿ ನಡೆಸಿದ ಉಗ್ರರನ್ನು ಪತ್ತೆಹಚ್ಚಲಾಗಿ ದ್ದು, ಆ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ ಮತ್ತು ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ರವಾನಿಸಲಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಕಳೆದ ತಿಂಗಳು, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭದ್ರತಾಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಎನ್ಕೌಂಟರ್ನಲ್ಲಿ ಇಬ್ಬರು ಕ್ಯಾಪ್ಟನ್ಗಳು ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿಗಳು ಹುತಾತ್ಮರಾಗಿದ್ದರು ಮತ್ತು ಇಬ್ಬರು ಗಾಯಗೊಂಡಿದ್ದರು.