ಡಿಕೆಶಿ ಸ್ವಕ್ಷೇತ್ರ ಕನಕಪುರದಲ್ಲಿ ಬಸ್ ಗೆ ಬೆಂಕಿ: ಲಾಠಿ ಚಾರ್ಚ್

ರಾಮನಗರ:  ಡಿಕೆ ಶಿವಕುಮಾರ್ ಸ್ವಕ್ಷೇತ್ರ ಕನಕಪುರ ಹೊತ್ತಿ ಉರಿಯುತ್ತಿದೆ. ಡಿಕೆ ಶಿವಕುಮಾರ್ ಬಂಧನ ಖಂಡಿಸಿ ತಾಲೂಕಿನಾದ್ಯಂತ ಭಾರೀ ಪ್ರತಿಭಟನೆ ನಡೆಸಲಾಗುತ್ತಿದೆ.

 ಕನಕಪುರ-ಹಾರೋಹಳ್ಳಿಗೆ ಮಾರ್ಗವಾಗಿ ಸಂಚರಿಸುತ್ತಿದ್ದ ಕೆಎಸ್ ಆರ್ ಟಿಸಿ  ಬಸ್ ಗೆ ಕಲ್ಲಹಳ್ಳಿಯಲ್ಲಿ  ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬೆಂಕಿ ನಂದಿಸಲು ಬಂದ ಅಗ್ನಿಶಾಮಕ ಸಿಬ್ಬಂದಿ ಮೇಲೂ ಕಲ್ಲು ಎಸೆಯಲಾಗಿದೆ.ನಾಲ್ಕೈದು ಬಸ್ ಗಳ ಮೇಲೆ ಕಲ್ಲೆಸೆದು ಹಾನಿ ಮಾಡಲಾಗಿದೆ.

 ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆಗಳಲ್ಲಿ ಟೈರು ಗಳಿಗೆ ಬೆಂಕಿ ಪ್ರತಿಭಟನೆ ನಡೆಸುತ್ತಿದ್ದ ಗುಂಪನ್ನು ಪೊಲೀಸರು ಲಾಠಿಚಾರ್ಚ್ ಮಾಡುವ ಮೂಲಕ ಚದುರಿಸಿದ್ದಾರೆ.  ಎಸ್ ಪಿ ಅನೂಪ್ ಶೆಟ್ಟಿ ಸ್ವತ: ಲಾಠಿ ಹಿಡಿದು ಚಾರ್ಚ್ ಮಾಡಿದ್ದಾರೆ.

 ರಾಮನಗರದಲ್ಲಿಯೂ ತೀವ್ರ ಆಕ್ರೋಶ ವ್ಯಕ್ತವಾಗಿದೆ.  ಡಿಕೆ ಶಿವಕುಮಾರ್ ಬಂಧನವಾಗುತ್ತಿದ್ದಂತೆ ಬೆಂಗಳೂರು- ಮೈಸೂರು  ಹೆದ್ದಾರಿಯಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಡಿಕೆ ಶಿವಕುಮಾರ್ ಪರ ಅಭಿಮಾನಿಗಳು ಭಾರೀ ಪ್ರತಿಭಟನೆ ನಡೆಸಿ

ಬೂದಿ ಮುಚ್ಚಿದ ಕೆಂಡವಾದ ಕನಕಪುರ- ರಸ್ತೆಗಿಳಿಯದ ಬಸ್ಸುಗಳು ರಾಮನಗರ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಂಧನದ ಹಿನ್ನೆಲೆ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ. ಈ ಹಿನ್ನೆಲೆ ಯಾವುದೇ ಸರ್ಕಾರಿ ಹಾಗೂ ಖಾಸಗಿ ಬಸ್ಸುಗಳಾಗಲಿ ರಸ್ತೆಗಿಳಿಯದ ಕಾರಣ ಸಾರ್ವಜನಿಕರು ಪರದಾಡುತ್ತಿದ್ದಾರೆ.
ಕನಕಪುರದಲ್ಲಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿದೆ. ಕೆಎಸ್‍ಆರ್ ಟಿಸಿ ಬಸ್ ಡಿಪೋ ಬಳಿ ಸಿಬ್ಬಂದಿ ಹಾಜರ್ ಆಗಿ ಬಸ್ಸುಗಳನ್ನು ಹೊರಗೆ ತೆಗೆಯದಿರಲು ನಿರ್ಧರಿಸಿದ್ದಾರೆ. ಮಂಗಳವಾರ ರಾತ್ರಿ ಡಿಕೆಶಿ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕನ ಬಂಧನ ಖಂಡಿಸಿ, 1 ಬಸ್ಸಿಗೆ ಬೆಂಕಿ ಹಚ್ಚಿ, ಸುಮಾರು 4 ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಇತ್ತ ಬಸ್ಸಿಗಾಗಿ ಪ್ರಯಾಣಿಕರು ಕಾಯುತ್ತಿದ್ದಾರೆ. ಆದರೆ ಬಸ್ ನಿಲ್ದಾಣದೊಳಗೆ ಒಂದೇ ಒಂದು ಬಸ್ ಕೂಡ ಬರುತ್ತಿಲ್ಲ. ಹಾಗೆಯೇ ಕನಕಪುರ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಆರಂಭಗೊಂಡಿದೆ. ತರಕಾರಿಗಳನ್ನು ವ್ಯಾಪಾರಸ್ಥರು ತಂದು ಮಾರಾಟಕ್ಕೆ ಕೂತಿದ್ದಾರೆ, ಆದರೆ ಖರೀದಿಗೆ ಯಾರೂ ಬರುತ್ತಿಲ್ಲ. ಒಂದೆಡೆ ಬೆಳಗ್ಗಿನ ವೇಳೆ ಸಹಜ ಸ್ಥಿತಿಯಲ್ಲಿರುವ ಕನಕಪುರ ಕಾಣುತ್ತಿದ್ದರೂ ಬೂದಿ ಮುಚ್ಚಿದ ಕೆಂಡದಂತೆ ಅಲ್ಲಿನ ಪರಿಸ್ಥಿತಿ ಇದೆ.
ಕನಕಪುರದಲ್ಲಿ ನಿಧಾನವಾಗಿ ಒಂದೊಂದೆ ಅಂಗಡಿ ಮುಂಗಟ್ಟುಗಳು ತೆರೆದುಕೊಳ್ಳುತ್ತಿದೆ. ಬಸ್ ನಿಲ್ದಾಣದ ಬಳಿಯ ಬೇಕರಿಗಳನ್ನು ಕೂಡ ತೆರೆಯಲಾಗಿದೆ. ಅಲ್ಲದೆ ಮತ್ತೆ ಯಾವುದೇ ಅಹಿತಕರ ಘಟನೆಗಳು, ಗಲಾಟೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸರು ಸಿಟಿ ರೌಂಡ್ಸ್ ಹಾಕುತ್ತಿದ್ದಾರೆ.


ದೆಹಲಿ ನಿವಾಸದಲ್ಲಿ ಹಣ ಸಿಕ್ಕ ಪ್ರಕರಣ ಸಂಬಂಧ ಇಡಿ ಪ್ರಶ್ನೆಗೆ ಸರಿಯಾಗಿ ಉತ್ತರಿಸಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ 8.30ಕ್ಕೆ ಮಾಜಿ ಸಚಿವ, ಕರ್ನಾಟಕ ಕಾಂಗ್ರೆಸ್ ಆಪದ್ಬಾಂಧವ ಡಿಕೆ ಶಿವಕುಮಾರ್ ರನ್ನು ಬಂಧಿಸಿದೆ. ಡಿಕೆ ಶಿವಕುಮಾರ್ ಬಂಧನವಾಗುತ್ತಿದ್ದಂತೆ, ಮಾಜಿ ಸಚಿವರ ಬೆಂಬಲಿಗರು ದೆಹಲಿ ಸೇರಿದಂತೆ ರಾಜ್ಯದಲ್ಲಿ ಕೂಡ ಮಂಗಳವಾರ ರಾತ್ರಿಯೇ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಅಭಿಮಾನಿಗಳು ಬೀದಿಗಿಳಿದು ಬೆಂಕಿಹಚ್ಚಿ ಆಕ್ರೋಶ ಹೊರಹಾಕಿದ್ದು, ಈ ವೇ��[04/09, 8:50 AM] Umesh Marpalli: ಕೆಲವೆಡೆ ಹಿಂಸಾಚಾರ ಕೂಡ ನಡೆದಿತ್ತು.
ರಾಮನಗರದಲ್ಲಿ ಡಿಕೆಶಿ ಅಭಿಮಾನಿಗಳಿ ಕೆಎಸ್‍ಆರ್ ಟಿಸಿಯ 1 ಬಸ್‍ಗೆ ಬೆಂಕಿ 4 ಬಸ್‍ಗಳ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದರು. ಐಜೂರು ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಅಭಿಮಾನಿಗಳು ರೋಷಾವೇಶ ಪ್ರದರ್ಶಿಸಿದರು. ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಕೇಂದ್ರ, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಹೆದ್ದಾರಿ ತಡೆದ ಪ್ರತಿಭಟನಕಾರರು ಪೊಲೀಸರ ನಡುವೆ ತಳ್ಳಾಟ, ನೂಕಾಟ ನಡೀತು. ಈ ವೇಳೆ ಡಿಕೆ ಅಭಿಮಾನಿಯೋರ್ವ ವಾಹನದ ಕೆಳಗೆ ಮಲಗಲು ಯತ್ನಿಸಿದ ಘಟನೆ ಸಂಭವಿಸಿತ್ತು.

ಕಲ್ಲಹಳ್ಳಿ ಗೇಟ್, ಕನಕಪುರ: ಡಿಕೆ ಅಭಿಮಾನಿಗಳು ಕನಕಪುರ ಕೋಡಿಹಳ್ಳಿ ಸಂಪರ್ಕ ರಸ್ತೆ ಬಂದ್ ಮಾಡಿ ರಸ್ತೆಗಳಲ್ಲಿ ಮರದ ದಿಮ್ಮಿಗಳನ್ನಿಟ್ಟು ಬೆಂಕಿ ಹಚ್ಚಿದರು. ಇದಲ್ಲದೇ ರಸ್ತೆಗೆ ಕಲ್ಲುಗಳನ್ನಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ಹತೋಟಿಗೆ ತರಲು ಪ್ರಯತ್ನಿಸಿದರು. ಇದೇ ವೇಳೆ ಎಸ್.ಪಿ ಸ್ವತಃ ಪರಿಸ್ಥಿತಿ ನಿಯಂತ್ರಿಸಿದರು. ಕನಕಪುರ ಗಲ್ಲಿ ಗಲ್ಲಿಗಳಲ್ಲೂ ಪೊಲೀಸರ ನಿಯೋಜನೆ ಮಾಡಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾತನೂರು, ಚನ್ನಬಸಪ್ಪ ಸರ್ಕಲ್‍ನಲ್ಲೂ ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಹೆದ್ದಾರಿ ತಡೆದು ಪ್ರತಿಭಟಿಸಿದ್ದರು

ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಮನಗರ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದ್ದು, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಮುಖಂಡರು ಹೇಳಿಕೆ ನೀಡಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ

Leave a Reply

Your email address will not be published. Required fields are marked *

error: Content is protected !!