ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ, 6 ವಾಹನಗಳು ಜಖಂ

ನವದೆಹಲಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಶುಕ್ರವಾರ ಐಇಡಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಐದರಿಂದ ಆರು ವಾಹನಗಳು ಜಖಂಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಔರಂಗಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯಿಂದ ಕೇವಲ 50 ಮೀಟರ್ ದೂರದಲ್ಲಿ ಸ್ಫೋಟ ಸಂಭವಿಸಿದ್ದು, ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

“ನಾವು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಅನೇಕ ಪೊಲೀಸ್ ತಂಡಗಳನ್ನು ಸ್ಥಳಕ್ಕೆ ಕರೆಯಿಸಿಕೊಳ್ಳಲಾಗಿದೆ. ಯಾವ ರೀತಿಯ ವಸ್ತುಗಳು ಸ್ಫೋಟಗೊಂಡಿವೆ ಎಂದು ಇನ್ನೂ ಪತ್ತೆಯಾಗಿಲ್ಲ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!