ಪರಶುರಾಮನ ಪ್ರತಿಮೆ ವಿಚಾರ: ಧಾರ್ಮಿಕ ಭಾವನೆಗೆ ಧಕ್ಕೆ ತಂದವರನ್ನು ಸಮಾಜ ಬಹಿಷ್ಕರಿಸಬೇಕು
ಉಡುಪಿ: ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ನಿರ್ಮಾಣದ ಹೆಸರಿನಲ್ಲಿ ಬ್ರಷ್ಟಾಚಾರ ಎಸಗಿದ್ದು ಮಾತ್ರವಲ್ಲದೆ ದಿನಕ್ಕೊಂದು ಸುಳ್ಳು ಹೇಳುತ್ತಾ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಧರ್ಮವಿರೋಧಿ ಜನಪ್ರತಿನಿಧಿಯನ್ನು ಸಮಾಜ ಬಹಿಷ್ಕರಿಸದಿದ್ದರೆ ಮುಂದಿನ ದಿನಗಳಲ್ಲಿ ಅಪಾಯ ಗ್ಯಾರಂಟಿ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾರು ಉದಯ ಶೆಟ್ಟಿ ಹೇಳಿದ್ದಾರೆ.
ಸಾರ್ವಜನಿಕರ ಹಣ ಲೂಟಿ ಮಾಡಲಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದ್ದು ಅಲ್ಲದೆ ಪರಶುರಾಮ ಮೂರ್ತಿಯ ಮೇಲ್ಭಾಗ ನಕಲಿ ಎಂದು ಗೊತ್ತಿದ್ದರೂ ಮೇಲ್ಭಾಗವನ್ನ ಎಲ್ಲಿಯೂ ಜನರಿಗೆ ಕಾಣಿಸದೆ ರಾತ್ರಿ ಕದ್ದು ನಿರಂತರವಾಗಿ ಜನರಿಗೆ ಸುಳ್ಳು ಹೇಳುತ್ತಾ ತಾನು ಮಾಡಿದ್ದೆ ಸರಿ ಎಂದು ಅಪಪ್ರಚಾರ ಮಾಡುತ್ತಿದ್ದ ಕಾರ್ಕಳ ಶಾಸಕರ ನಿಜ ಬಣ್ಣ ಬಯಲಾಗಿದೆ. ಇಷ್ಟಿದ್ದರೂ ಕೂಡ ಅಸಲಿ ಮೂರ್ತಿ ಎಂದು ಕೋರ್ಟಿಗೆ ಮತ್ತೆ ದಾಖಲೆಗಳನ್ನು ತಯಾರು ಮಾಡುತ್ತಿರುವ ಶಾಸಕರ ವರ್ತನೆ ನೋಡಿದರೆ ಅಚ್ಚರಿ ಎನಿಸುತ್ತಿದೆ. ಕೇವಲ ರಾಜಕೀಯ ಲಾಭ ಗೋಸ್ಕರ ಪರಶುರಾಮ ಥಿಮ್ ಪಾರ್ಕ್ ಬಳಸಿಕೊಂಡು ಜನರ ಭಾವನೆ ಜೊತೆ ಚೆಲ್ಲಾಟ ಕೂಡಲೇ ಸಮಾಜ ಬಹಿಷ್ಕರಿಸಬೇಕು ಮತ್ತು ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆಯಾಗಿ ಶಿಕ್ಷೆ ಆಗಬೇಕು ಎಂದರು.
ಪರಿಣತರಿಗೆ ನೀಡಿ….
ಪರಶುರಾಮ ಮೂರ್ತಿಯನ್ನು ತಯಾರು ಮಾಡಿದ ಕೃಷ್ಣ ನಾಯ್ಕ್ ಎಂಬವರಿಗೆ ಸರಿಯಾದ ಜ್ಞಾನ ಇಲ್ಲ.
ಅವರು ಕೂಡ ದಿನಕೊಂದು ಕಥೆಗಳನ್ನ ಹೇಳುತ್ತಾರೆ. ಮುಂದಿನ ದಿನಗಳಲ್ಲಿ ಗುಣಮಟ್ಟದ ಪ್ರತಿಮೆ ನಿರ್ಮಾಣವಾಗಬೇಕಾದರೆ ಯಾವುದೇ ಕಾರಣಕ್ಕೂ ಮೂರ್ತಿಯ ಮರು ರಚನೆಗೆ ಕೃಷ್ಣನಾಯಕ್ ಅವರಿಗೆ ನೀಡದೆ ಬೇರೆ ಪರಿಣಿತ ತಂಡಕ್ಕೆ ಅವಕಾಶ ಕಲ್ಪಿಸಬೇಕು.
ಪ್ರಚಂಡ ಸುಳ್ಳುಗಾರರ….
ನಿರಂತರ ಸುಳ್ಳು ಹೇಳಿ ಜನರನ್ನ ಮರಳು ಮಾಡುವ ಶಾಸಕರಿದ್ದರೆ ಅದು ಕಾರ್ಕಳದಲ್ಲಿ ಮಾತ್ರ. ರಾಜ್ಯ ಹಾಗೂ ಕೇಂದ್ರದಲ್ಲಿ ಕೂಡ ಇಂತಹ ಶಾಸಕ ಸಿಗಲಿಕ್ಕಿಲ್ಲ. ಇವರಿಗೆ ಪ್ರಚಂಡ ಸುಳ್ಳುಗಾರ ಎಂದು ಬಿರುದು ನೀಡಿದರೂ ತಪ್ಪಾಗಲಾರದು.
ತಪ್ಪು ಹೇಳಿಕೆಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುವ ಚಾಳಿ….
ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕೆಂದು ಜನರನ್ನು ಮರಳು ಮಾಡುತ್ತಾ ತನ್ನ ಅಭಿವೃದ್ಧಿ ಮಾಡಿಕೊಂಡ ಕಾರ್ಕಳ ಶಾಸಕ ಈಗ ಪರಶುರಾಮ ತೀನ್ ಪಾರ್ಕ್ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು ಎಂದು ಸುಳ್ಳು ಆರೋಪ ಮಾಡಿ ತನ್ನ ಭ್ರಷ್ಟಾಚಾರ ವನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ. ಪ್ರವಾಸೋದ್ಯಮಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ. ಕಾಕಳ ಮಸ್ತಕಾಭಿಷೇಕ ಸಂದರ್ಭದಲ್ಲಿ ಲಕ್ಷಾಂತರ ರೂಪಾಯಿ ಪ್ರವಾಸೋದ್ಯಮಕ್ಕೆ ನೀಡಿ ಕಾರ್ಕಳ ಅಭಿರುದ್ದಿ ಪಡಿಸಿದ್ದು ಕಾಂಗ್ರೆಸ್. ಆದರೆ ಕಾರ್ಕಳ ಶಾಸಕ ಎಣ್ಣೆ ಹೊಳೆ, ಕಾರ್ಕಳೋತ್ಸವ ಮೊದಲಾದ ಕಾರ್ಯಕ್ರಮವನ್ನು ಮಾಡಿ ಹಣ ಮಾಡಿದರೆ ವಿನಹ ಪ್ರವಾಸೋದ್ಯಮಕ್ಕೆ ಕೊಡುಗೆ ಏನು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಸ್ತೂರಿ ರಂಗನ್ ವರದಿ ಜಾರಿಯಾಗಲು ಬಿಡುವುದಿಲ್ಲ….
ಹುಲಿ ಯೋಜನೆ,ಕಸ್ತೂರಿ ರಂಗನ್ ವರದಿ ಮೊದಲಾದ ವಿಚಾರಗಳನ್ನು ಜನರಿಗೆ ಭಯಪಡಿಸುತ್ತಾ ಈ ಹಿಂದೆ ಅಧಿಕಾರ ಬಂದ ಬಿಜೆಪಿ ಜನರಿಗೆ ಮೋಸ ಮಾಡುತ್ತಿದೆ. ಈಗ ಮತ್ತೆ ರಾಜ್ಯದಲ್ಲಿ ವರದಿಯನ್ನು ಕೇಳಲು ಮುಂದಾಗಿದೆ ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಮತ್ತು ಹುಲಿ ಯೋಜನೆ ಜಾರಿಯಾಗಲು ಬಿಡುವುದಿಲ್ಲ.