ಬ್ರಹ್ಮಾವರ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಬ್ರಹ್ಮಾವರ ಜ.5 (ಉಡುಪಿ ಟೈಮ್ಸ್ ವರದಿ): ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದ  ಕಾಡೂರು ಹೆಗ್ಗಡ್ಡು ಎಂಬಲ್ಲಿ ನಡೆದಿದೆ.

ಗಣಪತಿ ಆಚಾರ್( 40 ) ಆತ್ಮಹತ್ಯೆ ಮಾಡಿಕೊಂಡವರು. ಇವರು ಅವಿವಾಹಿತರಾಗಿದ್ದು ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಜ.4 ರ ತಡರಾತ್ರಿ ತಮ್ಮ ವಾಸದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೆ ಪರಿಹಾರವಲ್ಲ. ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್: 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್.ಎಸ್.ಆರ್ ಸೆಕ್ಟರ್-4, ಬೆಂಗಳೂರು

Leave a Reply

Your email address will not be published. Required fields are marked *

error: Content is protected !!