ಭಾರತಕ್ಕೆ ಜೂ.23 ರಿಂದ ದುಬೈ ಎಮಿರೇಟ್ಸ್ ವಿಮಾಯಾನ ಮತ್ತೆ ಪ್ರಾರಂಭ
ದುಬೈ ಜೂ.20: ಕೋವಿಡ್ ಹಿನ್ನೆಲೆಯಲ್ಲಿ ನಿರ್ಬಂಧಿಸಲಾಗಿದ್ದ ವಿಮಾನ ಯಾನ ಜೂ.23 ರಿಂದ ಮತ್ತೆ ಭಾರತ ಸೇರಿದಂತೆ ಮೂರು ದೇಶಗಳಿಗೆ ಆರಂಭಿಸುವುದಾಗಿ ಎಂದು ದುಬೈ ಎಮಿರೇಟ್ಸ್ ಹೇಳಿದೆ.
ದುಬೈನ ನೈಸರ್ಗಿಕ ವಿಕೋಪ ಮತ್ತು ಬಿಕ್ಕಟ್ಟು ನಿರ್ವಹಣೆಯ ಉನ್ನತ ಮಟ್ಟದ ಸಮಿತಿ ವಿಮಾನ ಸಂಚಾರಕ್ಕೆ ಅವಕಾಶ ನೀಡಿದ್ದ್ ವಿಮಾನ ಹಾರಾಟಕ್ಕೆ ಒಪ್ಪಿಗೆ ನೀಡಲಾಗಿದೆ ಅದರಂತೆ ಭಾರತ, ದಕ್ಷಿಣ ಆಫ್ರಿಕಾ ಮತ್ತು ನೈಜೀರಿಯಾಕ್ಕೆ ಜೂನ್ 23ರಿಂದ ವಿಮಾನ ಹಾರಾಟ ನಡೆಸುವುದಾಗಿ ಘೋಷಣೆ ಮಾಡಲಾಗಿದೆ.
ಇದರೊಂದಿಗೆ ವಿಮಾನದಲ್ಲಿ ಸಂಚಾರ ನಡೆಸಬೇಕಾದರೆ ಯುಎಇ ಮಾನ್ಯತೆ ಪಡೆದ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು. ಭಾರತದಿಂದ ಸಂಚಾರ ನಡೆಸುವ ಪ್ರಯಾಣಿಕರು 4 ಗಂಟೆ ಮೊದಲು ಆರ್‌ಟಿಪಿಆರ್ ಪರೀಕ್ಷೆಗೆ ಒಳಪಡಬೇಕು. ದುಬೈನಲ್ಲಿ ಮತ್ತೆ ಪರೀಕ್ಷೆ ಮಾಡಿಸಬೇಕು ಎಂದು ಸೂಚನೆ ನೀಡಲಾಗಿದೆ. ಭಾರತದಿಂದ ದುಬೈಗೆ ಬರುವ ಪ್ರಯಾಣಿಕರು ಆರ್‌ಟಿಪಿಸಿಆರ್ ವರದಿ ಬರುವ ತನಕ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿರಬೇಕು. 24 ಗಂಟೆಯಲ್ಲಿ ವರದಿ ಕೈ ಸೇರಲಿದೆ. ದಕ್ಷಿಣ ಆಫ್ರಿಕಾ ಮತ್ತು ನೈಜೀರಿಯಾದ ಪ್ರಯಾಣಿಕರು ಕೋವಿಡ್ ಲಸಿಕೆ ಪಡೆದಿರಬೇಕು. ಸಂಚಾರ ಆರಂಭಿಸುವ 48 ಗಂಟೆಗಳ ಮೊದಲ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು ಎಂದು ತಿಳಿಸಿದೆ.