ಮಣಿಪಾಲ: ಕೆಎಂಸಿಯಿಂದ ಉಪಶಾಮಕ ಆರೈಕೆ ಸೇವೆಗಳ ಬಗ್ಗೆ ಜಾಗೃತಿ ನಡಿಗೆ

ಮಣಿಪಾಲ ಅ.27 (ಉಡುಪಿ ಟೈಮ್ಸ್ ವರದಿ): ಕಸ್ತೂರ್ಬಾ ಆಸ್ಪತ್ರೆಯ ಉಪಶಾಮಕ ಔಷಧ ಮತ್ತು ಸಹಾಯಕ ಆರೈಕೆ ವಿಭಾಗದ ವತಿಯಿಂದ ಮಾಹೆ ಮಣಿಪಾಲದ ವಿದ್ಯಾರ್ಥಿ ವ್ಯವಹಾರಗಳ ಸಹಯೋಗದೊಂದಿಗೆ ಉಪಶಾಮಕ ಆರೈಕೆಯ ಸೇವೆಗಳ ಬಗ್ಗೆ ಜಾಗೃತಿ ನಡಿಗೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ವಾಕಥಾನ್‌ಗೆ ಚಾಲನೆ ನೀಡಿದ ಅದಾನಿ ಪವರ್ ಲಿಮಿಟೆಡ್‌ನ ಸ್ಟೇಷನ್ ಹೆಡ್ ಶ್ರೀಧರ್ ಗಣೇಶನ್ ಅವರು ಮಾತನಾಡಿ, “ಒಟ್ಟಾಗಿ, ಗಂಭೀರವಾದ ಆರೋಗ್ಯ ಸವಾಲುಗಳನ್ನು ಎದುರಿಸುತ್ತಿರುವವರ ಜೀವನದಲ್ಲಿ ನಾವು ಬದಲಾವಣೆಯನ್ನು ಮಾಡಬಹುದು” ಎಂದು  ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ  ಅವರು, ‘ಈ ದಿನವು ಜಾಗೃತಿ ಮೂಡಿಸುವುದಷ್ಟೇ ಅಲ್ಲ, ವಿಶ್ವಾದ್ಯಂತ ಉಪಶಾಮಕ ಆರೈಕೆ ಸೇವೆಗಳನ್ನು ಹೆಚ್ಚಿಸುವ ನೀತಿಗಳನ್ನು ಬದಲಾಯಿಸಲು ಮತ್ತು ಬೆಂಬಲಿಸಲು ಪ್ರತಿಪಾದಿಸುತ್ತದೆ ಎಂದರು  .”

ಕಾರ್ಯಕ್ರಮದ ಗೌರವ ಅಥಿತಿಯಾಗಿದ್ದ  ನಾಡೋಜ ಡಾ.ಜಿ.ಶಂಕರ್ ಅವರು ಮಾತನಾಡಿ, ನಮ್ಮ ಧ್ಯೇಯವು ಪ್ರತಿಯೊಬ್ಬರಿಗೂ ಅಗತ್ಯವಿರುವ ಮತ್ತು ಅರ್ಹವಾದ ಸಹಾನುಭೂತಿಯ ಆರೈಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪುನರುಚ್ಚರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಹೆ  ಮಣಿಪಾಲದ ಆರೋಗ್ಯ ವಿಜ್ಞಾನಗಳ ಸಹ ಕುಲಪತಿ  ಡಾ. ಶರತ್ ರಾವ್ ಅವರು ಮಾತನಾಡಿ, “ಪ್ರತಿಯೊಬ್ಬರಿಗೂ ಅವರು ಅರ್ಹವಾದ ಸಹಾನುಭೂತಿಯ ಆರೈಕೆಗೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ. ಮಾಹೆ ಮಣಿಪಾಲವು ಕರ್ನಾಟಕದ ಅತಿ ದೊಡ್ಡ ಪಾಲಿಯೇಟಿವ್ ಕೇಂದ್ರವನ್ನು ನಿರ್ಮಿಸುತ್ತಿದ್ದು, ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಎಂದು ಅವರು ಹೇಳಿದರು.

ಮಾಹೆಯ ಬೋಧನಾ ಸಿಓಓ ಡಾ ಆನಂದ್ ವೇಣುಗೋಪಾಲ್, ಕಸ್ತೂರ್ಬಾ  ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಸಹ ಡೀನ್ ಮತ್ತು ಉಪಶಾಮಕ ಔಷಧ ವಿಭಾಗದ  ಮುಖ್ಯಸ್ಥ ಡಾ.ನವೀನ್ ಎಸ್.ಸಾಲಿನ್ಸ್,  ಉಡುಪಿಯ ಡಾ.ಟಿ.ಎಂ.ಎ.ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ್, ಉಮಾಕಾಂತ್, ಉಪಶಾಮಕ ವೈದ್ಯಶಾಸ್ತ್ರದ ಸಹ ಪ್ರಾಧ್ಯಾಪಕರಾದ ಡಾ.ಕೃತಿಕಾ ರಾವ್ ಉಪಸ್ಥಿತರಿದ್ದರು.

ಉಡುಪಿಯ ಬೋರ್ಡ್ ಹೈಸ್ಕೂಲ್‌ನಲ್ಲಿ ಆರಂಭವಾದ ನಡಿಗೆ ಜಾಥಾವು  ಕೆಎಂ ಮಾರ್ಗ, ಉಡುಪಿ ನ್ಯಾಯಾಲಯ ಮತ್ತು ಜೋಡುಕಟ್ಟೆ ವೃತ್ತದ ಮಾರ್ಗವಾಗಿ ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಮುಕ್ತಾಯಗೊಂಡಿತು. ವೈದ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಉಪಶಾಮಕ ಆರೈಕೆ ರೋಗಿಗಳ ಕುಟುಂಬಗಳು ಸೇರಿದಂತೆ 500 ಕ್ಕೂ ಹೆಚ್ಚು  ಜನರು ಈ ನಡಿಗೆಯಲ್ಲಿ ಪಾಲ್ಗೊಂಡರು

Leave a Reply

Your email address will not be published. Required fields are marked *

error: Content is protected !!