ಮೊದಲ ದಿನವೇ ನೂತನ ಮುಖ್ಯಮಂತ್ರಿಯಿಂದ ರೈತರು ಹಾಗೂ ನೇಕಾರರಿಗೆ ಸಿಹಿ ಸುದ್ಧಿ …
ಬೆಂಗಳೂರು :ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 14 ತಿಂಗಳ ಮೈತ್ರಿ ಸರ್ಕಾರ ಮಾಡಿದ ಸಾಧನೆ ಏನು? ಮುಂದೆ ನಾವು ಮಾಡಲಿರುವ ಅಭಿವೃದ್ಧಿ ಕೆಲಸಗಳು ಏನು ಎನ್ನುವುದನ್ನು ರಾಜ್ಯದ ಜನತೆಗೆ ತೋರಿಸಬೇಕಿದೆ. ಆದರೆ ರಾಜ್ಯದಲ್ಲಿ ಆಡಳಿತ ಮಟ್ಟ ಕುಸಿದಿದೆ. ಅದನ್ನು ಮೊದಲು ಸರಿ ಮಾಡುತ್ತೇವೆ ಎಂದು ತಿಳಿಸಿದರು.
ಯಾವುದೇ ಕಾರಣಕ್ಕೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ರಾಜ್ಯದ ಜನತೆಗೆ ಹಾಗೂ ಪ್ರತಿಪಕ್ಷದ ನಾಯಕರಿಗೆ ಭರವಸೆ ನೀಡುತ್ತೇನೆ. ನನ್ನನ್ನು ಯಾರೇ ದ್ವೇಷ ಮಾಡಿದರೂ ಅವರನ್ನು ಪ್ರೀತಿಯಿಂದ ಕಾಣುತ್ತೇನೆ. ಮುಖ್ಯಮಂತ್ರಿಯಾಗಲು ರಾಜ್ಯದ ಜನತೆಯ ಆಶೀರ್ವಾದ ನೀಡಿದ್ದಾರೆ ಹಾಗೂ ಲಕ್ಷಾಂತರ ಕಾರ್ಯಕರ್ತರು ಶ್ರಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಧ್ಯಕ್ಷ ಅಧ್ಯಕ್ಷ ಅಮಿತ್ ಶಾ ಅವರ ಅನುಗ್ರಹದಿಂದ ಈ ಹಂತಕ್ಕೆ ಬಂದಿದ್ದೇನೆ ಎಂದು ನೆನೆದರು.

ರಾಜ್ಯದಲ್ಲಿ ಮಳೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು, ನೇಕಾರರು, ಮೀನುಗಾರರ ಸಂಕಷ್ಟವನ್ನು ಪರಿಹರಿಸಲು ವಿಶೇಷ ಗಮನ ಹರಿಸುತ್ತೇನೆ. ಈ ಸಂಬಂಧ ಕ್ಯಾಬಿನೆಟ್ ಸಭೆಯಲ್ಲಿ ಎರಡು ನಿರ್ಧಾರಗಳನ್ನು ಕೈಗೊಂಡಿದ್ದೇವೆ. ಪ್ರಧಾನ ಮಂತ್ರಿ ಸಮ್ಮಾನ್ ಯೋಜನೆಗೆ ಈಗಾಗಲೇ ಆಯ್ಕೆ ಮಾಡಲಾದ ರೈತರಿಗೆ ರಾಜ್ಯ ಸರ್ಕಾರದಿಂದಲೂ 4 ಸಾವಿರ ರೂ.ವನ್ನು ಎರಡು ಕಂತುಗಳಲ್ಲಿ ನೀಡಲು ನಿರ್ಧರಿಸಿದ್ದೇವೆ. ನೇಕಾರರ 100 ಕೋಟಿ ರೂ. ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುತ್ತೇವೆ ಎಂದು ತಿಳಿಸಿದರು.
ವಿಧಾನಸಭೆ ಹಾಗೂ ಪರಿಷತ್ ಕಲಾಪದಲ್ಲಿ ಜುಲೈ 29ರಂದು ಅಂದ್ರೆ ಸೋಮವಾರ ಬೆಳಗ್ಗೆ 10 ಗಂಟೆಗೆ ಅಧಿವೇಶನ ನಡೆಯಲಿದೆ. ಅಂದು ಬಹುಮತ ಸಾಬೀತು ಹಾಗೂ ಹಣಕಾಸು ವಿಧೇಯಕಕ್ಕೆ ಒಪ್ಪಿಗೆ ಪಡೆಯಲು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ಇದೇ ವೇಳೆ ಮಾಧ್ಯಮಗಳು ರೈತರ ಸಾಲಮನ್ನಾ ವಿಚಾರವಾಗಿ ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್ ಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್ ಯಡಿಯೂರಪ್ಪ ಅವರು, ಈ ಕುರಿತು ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು. ಇದಕ್ಕೂ ಮುನ್ನ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು.