ರೈತರ ಪ್ರತಿಭಟನೆ – ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಶಾ ಮಾತುಕತೆ
ನವದೆಹಲಿ: ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು,ಪೊಲೀಸ್ ಸೇರಿದಂತೆ ರಕ್ಷಣಾ ಸಿಬ್ಬಂದಿ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಪ್ರತಿಭಟನಾ ನಿರತ ರೈತರೊಂದಿಗೆ ಗಲಭೆಗೆ ಪ್ರಚೋದನೆ ನೀಡುವ ಕನಿಷ್ಠ 10 ಗುಂಪುಗಳು ಕೂಡಿಕೊಂಡಿರಬಹುದು ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಈ ಮಾಹಿತಿಯ ಮೇರೆಗೆ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಇದರೊಂದಿಗೆ, ಸಭೆಯಲ್ಲಿ, ಪ್ರತಿಭಟನೆಯ ಸಂದರ್ಭ ಯಾವುದೇ ರೀತಿಯಾದ ಗಲಭೆಗಳಾಗದಂತೆ ಮುನ್ನೆಚ್ಚರಿಕೆ ವಹಿಸುವ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.