ವಾಯುಯಾನ ನಿಯಂತ್ರಕರಿಗೆ ಶಾಸನಬದ್ಧ ಸ್ಥಾನಮಾನ ನೀಡುವ ಮಸೂದೆಗೆ ಸಂಸತ್ತು ಅನುಮೋದನೆ

ನವದೆಹಲಿ: ಭಾರತದ ವಾಯುಯಾನ ಸುರಕ್ಷತಾ ರೇಟಿಂಗ್‌ಗಳನ್ನು ಸುಧಾರಿಸಲು ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ ಜನರಲ್ (ಡಿಜಿಸಿಎ) ಸೇರಿದಂತೆ ನಿಯಂತ್ರಕ ಸಂಸ್ಥೆಗಳಿಗೆ ಶಾಸನಬದ್ಧ ಸ್ಥಾನಮಾನವನ್ನು ನೀಡುವ ಮಸೂದೆಯನ್ನು ಸಂಸತ್ತು ಮಂಗಳವಾರ ಅಂಗೀಕರಿಸಿತು.

ವೈಮಾನಿಕ  (ತಿದ್ದುಪಡಿ) ಮಸೂದೆ, 2020, ದೇಶದ ಸಶಸ್ತ್ರ ಪಡೆಗಳಿಗೆ ಸೇರಿದ ವಿಮಾನಗಳನ್ನು 1934 ರ ವಿಮಾನ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಡಲು ಸಮ್ಮತಿಸಲಿದೆ.

ಹೊಸ ನಿಯಮಗಳ ಉಲ್ಲಂಘನೆಗಾಗಿ ದಂಡದ ಮೊತ್ತವನ್ನು 10 ಲಕ್ಷ ರೂ.ಗಳಿಂದ 1 ಕೋಟಿ ರೂ.ಗೆ ಹೆಚ್ಚಿಸಲು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ನೂತನ ಮಸೂದೆಯನ್ನು ರಾಜ್ಯಸಭೆಯಲ್ಲಿ ಧ್ವನಿ ಮತದಿಂದ ಅಂಗೀಕರಿಸಲಾಯಿತು.

ಇದು ಮಾರ್ಚ್ ನಲ್ಲಿ ಲೋಕಸಭೆಯ ಅನುಮೋದನೆ ಪಡೆದಿತ್ತು.

Leave a Reply

Your email address will not be published. Required fields are marked *

error: Content is protected !!