ಸಮಾಜದ್ರೋಹಿ ಶಕ್ತಿಗಳನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ಸಮರ್ಥ: ಯಡಿಯೂರಪ್ಪ

ಬೆಂಗಳೂರು: ಕೋವಿಡ್ ಸೋಂಕು ನಿಯಂತ್ರಣ ಮತ್ತು ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಡುವಲ್ಲಿ ಪೊಲೀಸರ ಶ್ರಮ ಶ್ಲಾಘನೀಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಪೊಲೀಸ್ ಸಂಸ್ಮರಣ ದಿನಾಚರಣೆ ಅಂಗವಾಗಿ ಇಂದು ನಗರ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.

ಕರ್ತವ್ಯದಲ್ಲಿದ್ದಾಗ ದೇಶಾದ್ಯಂತ ಒಟ್ಟಾರೆ 264 ಮಂದಿ ಪೊಲೀಸರು ಹುತಾತ್ಮರಾಗಿದ್ದಾರೆ. ಈ ಎಲ್ಲಾ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *

error: Content is protected !!