ಸುರತ್ಕಲ್: ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನೂತನ ಧ್ವಜಮರ ಸ್ಥಾಪನೆ
ಸುರತ್ಕಲ್: ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ನೂತನ ಧ್ವಜಮರ ಸ್ಥಾಪನೆ ಬುಧವಾರ ಜರಗಿತು.
ಶಿಬರೂರು ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು,ಪೂಜೆ ನೆರವೇರಿದ ಬಳಿಕ ಧ್ವಜಮರವನ್ನು ಪುನರ್ ಸ್ಥಾಪಿಸಲಾಯಿತು. ಇದೇ ಸಂದರ್ಭ ಎ.22ರಿಂದ 30ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಹಾಗೂ ವಿಶೇಷ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.
ಉಮೇಶ್ ಗುತ್ತಿನಾರ್ ಶಿಬರೂರುಗುತ್ತು, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಜಾಲಗುತ್ತು, ಪ್ರಮುಖರಾದ ಐಕಳ ಹರೀಶ್ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಶೆಟ್ಟಿ, ಸಿ.ಎ ಉದಯಕುಮಾರ್ ಶೆಟ್ಟಿ, ಉದಯ ಸುಂದರ್ ಶೆಟ್ಟಿ, ಯದುನಾರಾಯಣ ಶೆಟ್ಟಿ , ಸುಧಾಕರ ಪೂಂಜ ಸುರತ್ಕಲ್, ಸಿ.ಎ ಸುದೇಶ್ ಕುಮಾರ್ ರೈ, ಬಾಲಕೃಷ್ಣ ಕೊಠಾರಿ,ಪಾಲಿಕೆ ಸದಸ್ಯ ಲೋಕೇಶ್ ಬೊಳ್ಳಾಜೆ, ಕ್ಷೇತ್ರದ ಸಮಿತಿ ಪ್ರಮುಖರು, ಸಂಬಂಧಪಟ್ಟ ಗುತ್ತು ಮನೆತನದವರು, ಗ್ರಾಮಸ್ಥರು ಭಾಗವಹಿಸಿದ್ದರು.