ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ನಿಧನ, ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ
ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ನಿಧನರಾಗಿದ್ದಾರೆ. ಕಳೆದ ಕೆಲ ಸಮಯಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ತಡರಾತ್ರಿ ನಿಧನ ಹೊಂದಿದ್ದಾರೆ.
ಟಿವಿ ಮಾಧ್ಯಮಗಳಲ್ಲಿ ಹಾಗೂ ವಿವಿಧ ಪತ್ರಿಕೆಗಳಲ್ಲಿ 25 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ನಾಗರಾಜ ದೀಕ್ಷಿತ್ ಅನಾರೋಗ್ಯ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಅವರು ಟಿವಿ9ನಲ್ಲಿ ಇನ್ ಪುಟ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ನಾಗರಾಜ್ ದೀಕ್ಷಿತ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ರವರ ನಿಧನದಿಂದ ಮಾಧ್ಯಮರಂಗ ಪ್ರತಿಭಾವಂತರೊಬ್ಬರನ್ನು ಕಳೆದುಕೊಂಡಂತಾಗಿದೆ, ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ನಾಗರಾಜ್ ದೀಕ್ಷಿತ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ