ಹೃದಯಾಘಾತದಿಂದ ವಿದ್ಯಾರ್ಥಿ ಸಾವು
ಚಿತ್ರದುರ್ಗ ನ.3 : ಕಾಲೇಜಿನಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಕಾಶ್ (17) ಮೃತಪಟ್ಟವರು.
ಎಂದಿನಂತೆ ಕಾಲೇಜಿಗೆ ಬಂದಿದ್ದ ಪ್ರಕಾಶ್ ಆಯಾಸವೆಂದು ಕುಳಿತುಕೊಂಡಿದ್ದರು. ಈ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ.