ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಮಾಜಿ ಅಧ್ಯಕ್ಷ ಕರಾಮತ್ ಆಲಿ ನಿಧನ

ಉಡುಪಿ: ಕುಂಜಿಬೆಟ್ಟು ಕಟ್ಟೆ ಆಚಾರ್ಯ ಮಾರ್ಗ ನಿವಾಸಿ, ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಮಾಜಿ ಅಧ್ಯಕ್ಷರಾದ ಕರಾಮತ್ ಆಲಿ(77) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.


ಬಿಜೆಪಿ ಹಿರಿಯ ಕಾರ್ಯಕರ್ತ ಕರಾಮತ್ ಆಲಿ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ

ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಗೃಹ ಸಚಿವ ಡಾ.ವಿ. ಎಸ್. ಆಚಾರ್ಯರವರ ನಿಕಟವರ್ತಿ ಕರಾಮತ್ ಆಲಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪಕ್ಷದ ಅಲ್ಪಸಂಖ್ಯಾತ ಮೋರ್ಚಾದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಅಲ್ಪಸಂಖ್ಯಾತ ಸಮುದಾಯವನ್ನು ಬಿಜೆಪಿ ಜೊತೆ ಜೋಡಿಸುವ ಜೊತೆಗೆ ಸರಕಾರದ ವಿವಿಧ ಸೌಲಭ್ಯಗಳನ್ನು ಸಮುದಾಯಕ್ಕೆ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡಿರುವ ಕರಾಮತ್ ಆಲಿಯವರ ನಿಧನದಿಂದ ಪಕ್ಷ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮುಖಂಡರೊಬ್ಬರನ್ನು ಕಳೆದುಕೊಂಡಿದೆ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ನೀಡಲಿ ಹಾಗೂ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾಮತ್ ಆಲಿಯವರ ನಿವಾಸಕ್ಕೆ ಪಕ್ಷದ ಪದಾಧಿಕಾರಿಗಳೊಂದಿಗೆ ಬೇಟಿ ನೀಡಿದ ಕುಯಿಲಾಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಪ್ರಮುಖರಾದ ರವಿ ಅಮೀನ್, ಪೂರ್ಣಿಮಾ ಸುರೇಶ್ ನಾಯಕ್, ವೀಣಾ ಎಸ್. ಶೆಟ್ಟಿ, ದಾವೂದ್ ಅಬೂಬಕ್ಕರ್, ಗಿರೀಶ್ ಎಮ್. ಅಂಚನ್, ದಿನಕರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷರಾದ ದಾವೂದ್ ಅಬೂಬಕ್ಕರ್ ಸಂತಾಪ:- ನಮ್ಮೆಲ್ಲರ ಮಾರ್ಗದರ್ಶಕರಾಗಿದ್ದ ಕರಾಮತ್ ಆಲಿಯವರ ನಿಧನದ ಸುದ್ದಿ ಕೇಳಿ ತೀವ್ರ ದುಖಿತನಾಗಿದ್ದೇನೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರಕಾರದ ಸವಲತ್ತುಗಳನ್ನು ಒದಗಿಸಿಕೊಡುವಲ್ಲಿ ಹಲವಾರು ದಶಕಗಳ ಕಾಲ ಯಾವುದೇ ಫಲಾಪೇಕ್ಷೆ ಇಲ್ಲದೆ ದುಡಿಯುತ್ತಿದ್ದ ಇವರ ಅಗಲುವಿಕೆ ಜಿಲ್ಲೆಗೆ ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ಪರಮಾತ್ಮ ನೀಡಲಿ‌ ಎಂದು ದಾವೂದ್ ಅಬೂಬಕ್ಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!