ಉಡುಪಿ: ಬಸ್ಗೆ ಡಿಕ್ಕಿ- ದ್ವಿಚಕ್ರ ವಾಹನ ಸವಾರ ಮೃತ್ಯು- ಸಹಸವಾರನಿಗೆ ಗಾಯ
ಉಡುಪಿ, ಜ 27: ದ್ವಿಚಕ್ರ ವಾಹನವೊಂದು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಜ.26 ರಂದು ಶುಕ್ರವಾರ ರಾತ್ರಿ ಮಲ್ಪೆ ರಸ್ತೆಯ ಪಂದುಬೆಟ್ಟು ಎಂಬಲ್ಲಿ ನಡೆದಿದೆ.
ಮಣಿಪಾಲದ ರೆಸ್ಟೋರೆಂಟ್ ಒಂದರಲ್ಲಿ ಉದ್ಯೋಗಿಯಾಗಿರುವ ಇಬ್ಬರು ಯುವಕರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಬಸ್ಸಿನ ಚಾಲಕ ನೀಲಪ್ಪ ಎಂಬಾತನು ತಾನು ಚಲಾಯಿಸುತ್ತಿದ್ದ ಬಸ್ಸನ್ನು ಉಡುಪಿ ಕರಾವಳಿ ಕಡೆಯಿಂದ ಮಲ್ಪೆ ಕಡೆಗೆ ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ತೀರಾ ಬಲಬದಿಗೆ ಬಂದು ಮಲ್ಪೆ ಕಡೆಯಿಂದ ಉಡುಪಿ ಕಡೆಗೆ ಮೋಕಿಮ್ ಅನ್ಸಾರಿ ಇವರ ಸ್ಕೂಟರಿನಲ್ಲಿ ಮುಶರಫ್ ರವರನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಬರುತ್ತಿದ್ದ ಸ್ಕೂಟರ್ ಬಸ್ಸಿನ ಮುಂಭಾಗಕ್ಕೆ ಸವರಿಕೊಂಡು ಹೋದ ಪರಿಣಾಮ ಸ್ಕೂಟರ್ ಸವಾರರಾದ ಮೋಕಿಮ್ ಅನ್ಸಾರಿ ಮತ್ತು ಮುಶರಫ್ ರವರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದು, ಸ್ಕೂಟರ್ ಸವಾರ ಮೋಕಿಮ್ ಅನ್ಸಾರಿ ರವರ ತಲೆಯು ಬಸ್ಸಿನ ಹಿಂಭಾಗದ ಬಲಬದಿಯ ಟಯರಿನ ಅಡಿಗೆ ಬಿದ್ದು, ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಲ್ಲದೇ ಸಹಸವಾರ ಮುಶರಫ್ ರವರು ರಸ್ತೆಗೆ ಬಿದ್ದು, ತಲೆಗೆ ಸಣ್ಣಪುಟ್ಟ ಗಾಯವಾಗಿದ್ದು ಸ್ಥಳೀಯರು ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ.