ಇಂದು ರಾತ್ರಿಯಿಂದಲೇ ಲಾಕ್-ಡೌನ್ ಏನಿರುತ್ತೆ?, ಏನಿರಲ್ಲ?
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಲೇ ಇದೆ. ಇತ್ತ ಕೊರೊನಾ ಹರಡದಂತೆ ತಡೆಯಲು ಇವತ್ತು ರಾತ್ರಿಯಿಂದಲೇ ಲಾಕ್ ಡೌನ್ ಹೇರಲಾಗಿದೆ.
ಕೊರೊನಾ ನಿಯಂತ್ರಣಕ್ಕಾಗಿ ಇಂದು ರಾತ್ರಿ 8 ಗಂಟೆಯಿಂದ ಸಂಡೇ ಕರ್ಫ್ಯೂ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೂ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಸಂಪೂರ್ಣ ಬಂದ್ ಆಗಲಿದೆ. ಇಂದು ರಾತ್ರಿ 8ರ ನಂತರ ಬೇಕಾಬಿಟ್ಟಿಯಾಗಿ ಓಡಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ.
ನಾಳೆ ಏನಿರುತ್ತೆ?
* ಮಾಂಸದ ಅಂಗಡಿಗಳು ಓಪನ್
* ಹಣ್ಣು, ತರಕಾರಿ, ದಿನಸಿ ಪದಾರ್ಥ ಖರೀದಿಗೆ ಅವಕಾಶ
* ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್, ಮಾಧ್ಯಮಗಳಿಗೆ ಅವಕಾಶ
* ಎಂದಿನಂತೆ ಡಾಕ್ಟರ್ಸ್, ನರ್ಸ್ ಗಳಿಗೆ ಆಂಬುಲೆನ್ಸ್, ಓಡಾಟ
* ಅನಾರೋಗ್ಯ ಸಮಸ್ಯೆವುಳ್ಳರಿಗೆ ಆಸ್ಪತ್ರೆಗೆ ಹೋಗಲು ಅವಕಾಶ
* ಗರ್ಭಿಣಿ ಸ್ತ್ರೀಯರಿಗೆ ತಪಾಸಣೆಗೆ ಸಮಸ್ಯೆ ಇಲ್ಲ
* ತುರ್ತು ಚಿಕಿತ್ಸೆ, ರೋಗಿಗಳಿಗೆ ಆಸ್ಪತ್ರೆ ಹೋಗಲು ಅವಕಾಶ
ನಾಳೆ ಏನಿರಲ್ಲ?
* ರಸ್ತೆಗಿಳಿಯಲ್ಲ ಆಟೋ, ಕ್ಯಾಬ್, ಬೈಕ್
* ಬಾರ್, ಸೆಲೂನ್, ಬ್ಯೂಟಿ ಪಾರ್ಲರ್, ಪಾರ್ಕ್ ಕ್ಲೋಸ್
* ಗಾರ್ಮೆಂಟ್ಸ್, ಫ್ಯಾಕ್ಟರಿ, ಕಾರ್ಖಾನೆಗಳು, ಕಂಪನಿಗಳು ಸ್ತಬ್ಧ
* ಎಲ್ಲಾ ಪಾರ್ಕ್ ಗಳು ಬಂದ್
* ಮದ್ಯದಂಗಡಿ ಸಂಪೂರ್ಣ ಬಂದ್
* ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಓಡಲ್ಲ (ಭಾನುವಾರ ಬೆಳಗ್ಗೆಯಿಂದ ಸೋಮವಾರ ಬೆಳಗ್ಗೆಯವರೆಗೂ ಇರುವುದಿಲ್ಲ)
* ಹೋಟೆಲ್‍ಗಳಲ್ಲಿ ಪಾರ್ಸಲ್ ಮಾತ್ರ.