ಉಡುಪಿ: ಏ.11 ರಂದು ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ
ಉಡುಪಿ: ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ) ಉಡುಪಿ, ಕಾರ್ಲ್‍ಜೈಸ್ ಇಂಡಿಯಾ (ಬೆಂಗಳೂರು) ಪ್ರೈವೇಟ್ ಲಿಮಿಟೆಡ್, ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.
ಈ ಶಿಬಿರವು ಏ.11 ರಂದು ಬೆಳಿಗ್ಗೆ 8. ರಿಂದ ಮಧ್ಯಾಹ್ನ 1 ರ ವರೆಗೆ ಕಲ್ಪಂಕ-ಗುಂಡಿಬೈಲು ಸಮೀಪದ ಹೊಸಬಾಕ್ಯಾರು ನಾಗಬನದ ಬಳಿ ಇರುವ ಬ್ರಾಹ್ಮಿ ಸಭಾಭವನದಲ್ಲಿ ನಡೆಯಲಿದ್ದು, ಈ ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗುವುದು, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದವರಿಗೆ, ಗೊತ್ತುಪಡಿಸಿದ ದಿನಾಂಕದಂದು ಉಡುಪಿಯ ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆಗೆ ತಮ್ಮದೇ ಆದ ವಾಹನದಲ್ಲಿ ಕರೆದುಕೊಂಡು ಹೋಗಿ ಶಸ್ತ್ರ ಚಿಕಿತ್ಸೆ ಮಾಡಿಸಿ ಮರುದಿನ ವಾಪಸ್ಸು ಕರೆತಂದು ಬಿಡಲಾಗುವುದು.
ಶಿಬಿರದಲ್ಲಿ ಕನ್ನಡಕದ ಅಗತ್ಯವಿರುವವರಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಗುವುದು. ಹಾಗಾಗಿ ಸಾರ್ವಜನಿಕರು ಈ ಶಿಬಿರದ ಹೆಚ್ಚಿನ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದ್ದು, ಶಿಬಿರದ ಕುರಿತ ಹೆಚ್ಚಿನ ಮಾಹಿತಿಗಾಗಿ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ನ ಅಧ್ಯಕ್ಷ ವಿಷ್ಣುಪ್ರಸಾದ್ ಪಾಡಿಗಾರ್ – 9880645342, ಪ್ರಸಾದ್ ನೇತ್ರಾಲಯದ ಆಡಳಿತಾಧಿಕಾರಿ ಎಂ.ವಿ.ಆಚಾರ್ಯ-94814 23095, ಪ್ರಸಾದ್ ನೇತ್ರಾಲಯದ ಸಾರ್ವಜನಿಕ ಸಂಪರ್ಕಾಧಿಕಾರಿ ಮೋಹನ್ ದಾಸ್ – 99451 70508 ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.