ಬೆಂಗಳೂರು: ಜನತಾ ಕರ್ಫ್ಯೂ ನಡುವೆಯೂ ರಾಜ್ಯದಲ್ಲಿ ಇಂದು ಹೊಸದಾಗಿ 6 ಕೊರೋನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 26ಕ್ಕೆ ಏರಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಜನತಾ ಕರ್ಫ್ಯೂಗೆ ಸಾರ್ವಜನಿಕವಾಗಿ ಉತ್ತಮ ಬೆಂಬಲ ದೊರೆತಿದೆ. ಆದರೆ ಕೊರೋನಾ ಪೀಡಿತರ ಸಂಖ್ಯೆ ಮಾತ್ರ ದಿನೇ ದಿನೇ ಹೆಚ್ಚಾಗುತ್ತಲೇ ಇದೆ.