ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ `99′ ಚಿತ್ರ ಏಪ್ರಿಲ್ 26ರಂದು ಬಿಡುಗಡೆ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ, ರಾಮು ಫಿûಲಂಸ್ ಲಾಂಛನದಲ್ಲಿ ರಾಮು ಅವರು ನಿರ್ಮಿಸಿರುವ 99 ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಏಪ್ರಿಲ್ 26ರಂದು ಬಿಡುಗಡೆಯಾಗಲಿದೆ.

ಗೋಲ್ದನ್ ಸ್ಟಾರ್ ಗಣೇಶ್ ನಾಯಕರಾಗಿ ಅಭಿನಯಿಸಿರುವ ಈ ಚಿತ್ರವನ್ನು ಪ್ರೀತಂ ಗುಬ್ಬಿ ನಿರ್ದೇಶಿಸಿದ್ದಾರೆ. ಜಾಕಿ ಭಾವನ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಹೇಮಂತ್, ಸಮೀಕ್ಷ ಮುಂತಾದವರು ಅಭಿನಯಿಸಿದ್ದಾರೆ.

ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಇದು ಅವರ ಸಂಗೀತ ನಿರ್ದೇಶನದ 100ನೇ ಚಿತ್ರ. ಉಳಿದಂತೆ ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.

Leave a Reply

Your email address will not be published. Required fields are marked *

error: Content is protected !!