ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ : 20 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಮೂಡುಬಿದಿರೆ: ಇಂದು ಬೆಳಿಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ  ಬಸ್ ನಲ್ಲಿದ್ದ ಸುಮಾರು 20 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮೂಡಬಿದಿರೆ ಸಮೀಪದ ತೋಡಾರ್ ನಲ್ಲಿ ನಡೆದಿದೆ.

ಮೂಡಬಿದಿರೆಯಿಂದ ಮಂಗಳೂರುಗೆ ಸಾಗುತ್ತಿದ್ದ ಬಸ್ ಮತ್ತು ಮಂಗಳೂರಿನಿಂದ ಬರುತ್ತಿದ್ದ ಲಾರಿ ನಡುವೆ ತೋಡಾರ್ ಮಸೀದಿ  ಬಳಿ ಅಪಘಾತ ನಡೆದಿದೆ. ಘಟನೆಯಿಂದ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.  ಎರಡೂ ವಾಹನಗಳ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೊರತರಲು ಸ್ಥಳೀಯರು ಹರಸಾಹಸ ಪಟ್ಟಿದ್ದು , ನಂತರ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!