ಕುಡಿದ ಅಮಲಿನಲ್ಲಿ ಪೊಲೀಸ್ ಗೆ ಕಿಸ್ ಕೊಟ್ಟು ! ಈಗ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ಯುವಕ

ಹೈದರಾಬಾದ್: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಕರ್ತವ್ಯದ ಮೇಲಿರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗೆ ಕಿಸ್ ಕೊಟ್ಟು  ಜೈಲು ಪಾಲಾದ  ಘಟನೆ ಹೈದರಾಬಾದಿನಲ್ಲಿ ನಡೆದಿದೆ.
ನಗರದಲ್ಲಿ ವಾರ್ಷಿಕ ಹಿಂದೂ ಹಬ್ಬದ ಆಚರಣೆ ವೇಳೆ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಕಿಸ್ ಮಾಡಿದ್ದರಿಂದ ಸಬ್ ಇನ್ಸ್‌ಪೆಕ್ಟರ್‌ ಕೋಪಗೊಂಡಿದ್ದಾರೆ. ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈದರಾಬಾದ್‍ನಲ್ಲಿ ಬೊನಾಲು ಹಬ್ಬವನ್ನು ಆಚರಿಸಲಾಗುತ್ತಿತ್ತು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆಗಾಗಿ ಪೊಲೀಸರನ್ನು ನೇಮಿಸಲಾಗಿತ್ತು. ಹಬ್ಬದ ನಿಮಿತ್ತ ಮೆರವಣಿಗೆ ನಡೆಸುತ್ತಿದ್ದ ವೇಳೆ ಭದ್ರತಾ ಕಾರ್ಯದಲ್ಲಿ ತೊಡಗಿಕೊಂಡಿದ್ದೆವು. ಮೆರವಣಿಗೆ ಜೊತೆ ತೆರಳುತ್ತಿದ್ದಾಗ ನನಗೆ ಭಾನು ಎಂಬ ವ್ಯಕ್ತಿ ಕುಡಿದ ಅಮಲಿನಲ್ಲಿ ಮುತ್ತು ಕೊಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮಹೇಂದ್ರ ಅವರು ವಿವರಿಸಿದ್ದಾರೆ.
ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದೇವೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ನಿರ್ಧರಿಸಲಾಗಿದೆ ಎಂದು ಇನ್ಸ್‌ಪೆಕ್ಟರ್‌ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!