ಜಿಲ್ಲೆಯಲ್ಲಿ ಸುಸಜ್ಜಿತವಾಗಿ ಪಡಿತರ ವಿತರಣೆಗೆ ಕ್ರಮ: ಜಿಲ್ಲಾಧಿಕಾರಿ

ಉಡುಪಿ: ಕೊರೊನಾ ವೈರಸ್ ನಿಯಂತ್ರಣಕ್ಕೆ ಸಂಬಂದಿಸಿದಂತೆ ಜಿಲ್ಲಾದ್ಯಂತ ಲಾಕ್ ಡೌನ್ ಆಜ್ಞೆ ಜ್ಯಾರಿಯಲ್ಲಿರುವುದರಿಂದ ಮಾನ್ಯ ಮುಜರಾಯಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್-೧೯ ಸಭೆಯಲ್ಲಿ ನೀಡಿರುವ ನಿರ್ದೇಶನದಂತೆ ಎಪ್ರಿಲ್ ಹಾಗೂ ಮೇ ತಿಂಗಳ ಮಾಹೆಯ ಪಡಿತರವನ್ನು ಒಮ್ಮೆಗೆ ಪಡಿತರ ಆಂತ್ಯೋದಯ / ಬಿಪಿಎಲ್ ಪಡಿತರ ಚೀಟಿದಾರರಿಗೆ ಏ.1ರಿಂದ ಜಿಲ್ಲೆಯಲ್ಲಿರುವ ಎಲ್ಲಾ ಒಟ್ಟು 292 ಸೊಸೈಟಿ /ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಮಾಡುವಂತೆ ತಿಳಿಸಲಾಗಿದೆ. ಸದ್ರಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಮಾಡುವಾಗ ಈ ಕೆಳಗೆ ತಿಳಿಸಿರುವ ಕ್ರಮಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.


ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿಯ ಲೆಕ್ಕದಲ್ಲಿ ಪ್ರತಿ ದಿನ 50 ರಿಂದ 100 ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ನೀಡುವ ಬಗ್ಗೆ ಸದ್ರಿಯವರಿಗೆ ಮಂಚಿತವಾಗಿ ಬೇರೆ ಬೇರೆ ಸಮಯ ನಿಗದಿಪಡಿಸಿ ದೂರವಾಣಿಗಳ ಮೂಲಕ ಸಂದೇಶವನ್ನು ನೀಡಿ ಜನ ಸಂದಣಿಯಾಗದಂತೆ ಪಡಿತರವನ್ನು ಪಡೆಯಲು ತಿಳಿಸುವುದು ಹಾಗೂ ಜನಸಂದಣಿ ಆಗದಂತೆ ತಡೆಯುವುದು.


ಹೊರ ಜಿಲ್ಲೆಯ ಪಡಿತರ ಚೀಟಿದಾರರಿಗೆ ವ್ಯವಸ್ಥೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ವಿತರಿಸುವುದು.
ಪಡಿತರ ವಿತರಣೆಯ ಸಮಯದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಗುರುತುಗಳನ್ನು ಮಾಡುವುದರೊಂದಿಗೆ, ಪಡಿತರವನ್ನು ತೆಗೆದುಕೊಳ್ಳಲು ಬರುವವರಿಗೆ ಸ್ಯಾನಿಟೈಜರ್ಸ್/ಸಾಬೂನು ಮತ್ತು ನೀರಿನ ವ್ಯವಸ್ಥೆ ಮಾಡುವಂತೆ ಮತ್ತು ಈ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ಆಯಾ ತಾಲೂಕುಗಳಿಗೆ ಸಂಬಂಧಪಟ್ಟ ತಹಶೀಲ್ದಾರರು ಗಮನಹರಿಸುವುದು. ಈ ಬಗ್ಗೆ ಸುರಕ್ಷತೆಯ ದೃಷ್ಟಿಯಿಂದ ಇವುಗಳನ್ನು ಪರಿಶೀಲಿಸಲು ಓರ್ವ ಸಂಬಂಧಪಟ್ಟ ಅಧಿಕಾರಿಯನ್ನು ನೇಮಿಸುವುದು.


ಪಡಿತರ ವಿತರಣೆಯ ಸಮಯದಲ್ಲಿ OTP ಬರದೇ ಇದ್ದಲ್ಲಿ ಅದಕ್ಕೆ ಕಾಯದೆ ರಿಜಿಸ್ಟರ್ ನಲ್ಲಿ ವಿತರಣೆ ಮಾಡುವುದು ಯಾವುದೇ ಕಾರಣಕ್ಕೂ ಪಡಿತರ ನೀಡುವಾಗ ವಿಳಂಬವಾಗದಂತೆ ನೋಡಿಕೊಳ್ಳುವುದು.

ಕೋವಿಡ್-೧೯ ಸೋಂಕು ಹರಡುವಿಕೆಯನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸೂಚನೆಗಳನ್ನು ಹಾಗೂ ಸುರಕ್ಷಿತ ಕ್ರಮಗಳ ನಿಯಮಗಳನ್ನು ಪಾಲಿಸದಿದ್ದಲ್ಲಿ ಕಾನೂನು ರೀತಿಯ ಸೂಕ್ತ ಕ್ರಮ ಕೈಗೊಳಲಾಗುವುದು .
ಯಾವುದೇ ಕಾರಣಕ್ಕೂ ಪಡಿತರ ವಿತರಣೆಯಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲು ಸಮನ್ವಯಸಾದಿಸಲು ಆಯಾ ತಾಲೂಕುಗಳಿಗೆ ಸಂಬಂಧಪಟ್ಟ ತಹಶೀಲ್ದಾರರಿಗೆ ಸೂಚಿಸಿದೆ.
ಪಡಿತರ ವಿತರಣೆಯ ಸಮಯದಲ್ಲಿ ಈ ಮೇಲೆ ತಿಳಿಸಿರುವ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!