ಕೊರೊನಾ ಸಂಕಷ್ಟದ ನಡುವೆ ದ. ಕ., ಉಡುಪಿ ಸಹಿತ ರಾಜ್ಯದ 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿ
ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಕರ್ನಾಟಕದ ಜನತೆಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಂಗಳವಾರದರಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಏಪ್ರಿಲ್ 7 ಮತ್ತು 8ರಂದು ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಲಿದೆ.ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ದಾವಣಗೆರೆ, ಹಾಸನ, ಕೊಡಗು ಮತ್ತು ಮೈಸೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಉಷ್ಣ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ತೀವ್ರತೆ ಕಡಿಮೆ ಎಂದು ಹೇಳಲಾಗುತ್ತಿದೆ. ಭಾರತದಲ್ಲಿ ಸದ್ಯ ಬೇಸಿಗೆ ಇರೋದರಿಂದ ಸ್ಪಲ್ಪ ಪ್ರಮಾಣದಲ್ಲಿ ಸೋಂಕು ಹರಡುವಿಕೆಗೆ ನೈಸರ್ಗಿಕವಾಗಿ ತಡೆ ಬೀಳಬಹುದು ಎಂಬ ಲೆಕ್ಕಾಚಾರಗಳು ನಡೆದಿದ್ದವು. ಇದೀಗ ಏಪ್ರಿಲ್ 7 ಮತ್ತು 8 ರಂದು ಮಳೆಯಾದ್ರೆ ವಾತಾವರಣದಲ್ಲಿ ಬದಲಾಗುವ ಸಾಧ್ಯತೆಗಳಿವೆ. ಮಳೆಯಾದ್ರೆ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಾ ಎಂಬ ಆತಂಕ ಜನರಲ್ಲಿ ಮನೆ ಮಾಡಿದೆ