ಅಮಿತ್ ಶಾ ಭಯ, ಅನಿಶ್ಚಿತತೆ ವಾತಾವರಣ ಸೃಷ್ಟಿಸಿದ್ದಾರೆ- ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ನವದೆಹಲಿ: ಜನರನ್ನು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪವನ್ನು ತಳ್ಳಿಹಾಕಿರುವ ಕಾಂಗ್ರೆಸ್, ಪೌರತ್ವ ತಿದ್ದುಪಡಿ ಕಾಯ್ದೆ ನಂತರ ಎನ್ ಆರ್ ಸಿಯನ್ನು ಜಾರಿಗೆ ತರುವುದಾಗಿ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳಿಕೆ ನೀಡುವ ಮೂಲಕ ದೇಶದಲ್ಲಿ ಭಯ ಹಾಗೂ ಅನಿಶ್ಚಿತತೆಯ ವಾತಾವರಣ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ನಂತರ ಎನ್ ಆರ್ ಸಿಯನ್ನು ಜಾರಿಗೊಳಿಸುವುದಾಗಿ ಗೃಹ ಸಚಿವರು ಸಂಸತ್ತಿನ ಉಭಯ ಸದನಗಳಲ್ಲಿ ನೀಡಿರುವ ಹೇಳಿಕೆ ಅನಿಶ್ಚಿತತೆ ಹಾಗೂ ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಮುಂದುವರಿದಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಸ್ಯೆ ಪರಿಹರಿಸುವ ಗುಣ ಹೊಂದಿರಬೇಕು. ಪ್ರಧಾನಿ ಒಂದು ವೇಳೆ ಸೂಕ್ಷ್ಮ ಹಾಗೂ ಗಂಭೀರ ಮನಸ್ಥಿತಿವುಳ್ಳವರಾಗಿದ್ದರೆ ರಾಷ್ಟ್ರೀಯ ಏಕೀಕರಣ ಸಮಿತಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಈ ವಿಚಾರದ ಬಗ್ಗೆ ಚರ್ಚಿಸಬೇಕು ಆನಂದ್ ಶರ್ಮಾ ಹೇಳಿದ್ದಾರೆ.