ಅಮೂಲ್ಯಗೆ ನಕ್ಸಲರ ಜತೆ ಸಂಬಂಧ:ಮುಖ್ಯಮಂತ್ರಿ ಯಡಿಯೂರಪ್ಪ

ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಯುವತಿಗೆ ನಕ್ಸಲರ ಜತೆ ಸಂಬಂಧವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ತಪ್ಪು ಮಾಡಿದವರಿಗೆ ಸೂಕ್ತ ಶಿಕ್ಷೆಯಾಗಬೇಕು. ಇದರ ಹಿಂದೆಯಿರುವ ಸಂಘಟನೆಗಳ ಮೇಲೆ ಕ್ರಮ ಜರಗಿಸಲಾಗುವುದು ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಹೇಳಿದ್ದಾರೆ.

ತಪ್ಪು ಮಾಡಿರುವ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳದಿದ್ದರೆ ಇಂತಹ ಘಟನೆಗಳು ಕೊನೆಯಾಗುವುದಿಲ್ಲ. ಸಂಘಟನೆಗಳನ್ನು ಸರಿಯಾಗಿ ತನಿಖೆಗೆ ಒಳಪಡಿಸಿದರೆ ಅವಳಿಗೆ ಈ ರೀತಿ ಪ್ರೇರಣೆ ಕೊಟ್ಟಿರುವುದು ಯಾರೆಂಬುದು ಗೊತ್ತಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡುವಂತಹ ವ್ಯವಸ್ಥಿತ ಸಂಚು ಇದರ ಹಿಂದೆ ಇದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದರು.

‘ಅವಳ ಕೈಕಾಲು ಮುರಿಯಿರಿ, ಜಾಮೀನು ಸಿಗಬಾರದು. ನಾನು ಅವಳ ರಕ್ಷಣೆಗೆ ಹೋಗಲ್ಲ ಎಂದು ಅವಳ ತಂದೆಯವರೇ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ,  ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಖಂಡನೀಯ ನಡವಳಿಕೆ. ಪೊಲೀಸರು  ಸರಿಯಾದ ತನಿಖೆ ನಡೆಸಿ ಆಕೆಗೆ ತನ್ನ ತಪ್ಪಿನ ಅರಿವಾಗುವಂತಹ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!