ಅಣ್ಣಾಮಲೈ ರಾಜೀನಾಮೆ ಅಂಗೀಕರಿಸಿದ ಕೇಂದ್ರ ಗೃಹ ಇಲಾಖೆ

ಬೆಂಗಳೂರು: ಐಪಿಎಸ್ ಹುದ್ದೆಗೆ ಅಣ್ಣಾಮಲೈ ಸಲ್ಲಿಸಿದ್ದ ರಾಜೀನಾಮೆಯನ್ನು ಕೇಂದ್ರ ಗೃಹ ಇಲಾಖೆ ಇಂದು ಅಂಗೀಕರಿಸಿದೆ.
2011ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಆದರೆ ಮೇ 28ರಂದು ಐಪಿಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.
ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ್ದ ಅಣ್ಣಾಮಲೈ, ನಾನು ಸರ್ವಿಸ್‍ಗೆ ಸೇರಿ 9 ವರ್ಷಗಳು ಕಳೆದವು. ಆದರೆ ನಾನು ನನ್ನ ಕುಟುಂಬಕ್ಕೆ ಸಮಯ ಕೊಡಲು ಆಗುತ್ತಿಲ್ಲ. ನಾನು ಇಲ್ಲಿ ಇರುವುದ್ದಕ್ಕೆ ಕೆಲವು ಪ್ರಮುಖರು ಕಾರಣರಾಗಿದ್ದರು. ಆದರೆ ಕೊನೆ ಪಕ್ಷ ಅವರ ಅಂತ್ಯಕ್ರಿಯೆಗೂ ಹೋಗುವುದಕ್ಕೆ ನನಗೆ ಆಗಲಿಲ್ಲ. ತಂದೆ ತಾಯಿ, ಬಂಧು ಬಳಗ ಎಲ್ಲಾ ಊರಲ್ಲಿ ಇದ್ದಾರೆ. ನಾನು ಇಲ್ಲಿದ್ದು ಏನು ಮಾಡಲಿ ಎಂದು ಹೇಳಿದ್ದರು.

ಕಳೆದ ಆರು ತಿಂಗಳ ಹಿಂದೆಯೇ ರಾಜೀನಾಮೆ ನೀಡಬೇಕೆಂದು ಪ್ಲಾನ್ ಮಾಡಿದ್ದೆ. ಚುನಾವಣೆ ಮುಗಿಸದೇ ಹೋದರೆ ಸರಿ ಹೋಗಲ್ಲ ಎಂದು ಎಲೆಕ್ಷನ್ ಬಂದೋಬಸ್ತ್ ಮುಗಿಸಿದ್ದೇನೆ. ನನಗೆ ಇದೇ ಜೀವನ ಅಲ್ಲ, ಇನ್ನೂ ಬೇರೆ ಜೀವನ ಇದೆ. ಎಷ್ಟು ದಿನ ಕೊಲೆ, ಸುಲಿಗೆ, ದರೋಡೆ ಬಗ್ಗೆ ಕೆಲಸ ಮಾಡಲಿ.
ಮುಂದಿನ ಆರು ತಿಂಗಳು ವಿಶ್ರಾಂತಿ ಪಡೆಯುತ್ತೇನೆ. ರಾಜೀನಾಮೆ ಬಳಿಕ ಹಿಮಾಲಯ ಟ್ರೆಕ್ಕಿಂಗ್ ಹೋಗುತ್ತೇನೆ. ಅಲ್ಲದೇ ನನ್ನ ಕುಟುಂಬಕ್ಕೆ ಟೈಂ ಸಹ ಕೋಡುತ್ತೇನೆ. ನನ್ನ ಮಗ ಓದುತ್ತಿದ್ದಾನೆ. ಅವನ ಜೊತೆ ಇರುತ್ತೇನೆ. 33-34ನೇ ವಯಸ್ಸಿಗೆ ಯಾರು ಈ ನಿರ್ಧಾರ ತೆಗೆದುಕೊಳ್ಳಲ್ಲ. ಆದರೆ ನಾನು ತೆಗೆದುಕೊಂಡಿದ್ದೇನೆ. ಏಕೆಂದರೆ ನನಗೆ ಬೇರೆ ಜೀವನ ಇದೆ ಎಂದು ಅಣ್ಣಾಮಲೈ ತಿಳಿಸಿದ್ದರೆ. .
ಇದಾದ ಬಳಿಕ ಅಣ್ಣಾಮೈಲೆ ಅವರು ಅಭಿಮಾನಿಗಳಿಗೆ ಪತ್ರ ಬರೆಯುವ ಮೂಲಕ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದರು. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ನನ್ನ ರಾಜೀನಾಮೆ ಬಗ್ಗೆ ಮಾತನಾಡಲು ಇಷ್ಟಪಡುತ್ತೇನೆ. ಇಂದು ಅಂದರೆ ಮೇ 28ರಂದು ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆಯ ಪ್ರಕ್ರಿಯೆ ಅಧಿಕೃತವಾಗಿ ಪೂರ್ಣಗೊಳಲೂ ಸ್ವಲ್ಪ ಸಮಯ ಬೇಕಾಗುತ್ತದೆ. ನನ್ನ ಸುತ್ತ ಹರಿದಾಡುವ ಮಾತುಗಳ ಬಗ್ಗೆ ನಾನು ಸ್ಪಷ್ಟನೆ ನೀಡುತ್ತೇನೆ. ನಾನು 6 ತಿಂಗಳಿನಿಂದ ಯೋಚಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ನಾನು ಕಳೆದ 9 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದೇನೆ. ನಾನು ನನ್ನ ಖಾಕಿಯಲ್ಲಿ ಪ್ರತಿ ಕ್ಷಣವನ್ನು ಜೀವಿಸಿದ್ದೇನೆ ಎಂದು ತಿಳಿಸಿದ್ದರು.
ನಾನು ನನ್ನ ಸಹದ್ಯೋಗಿಗಳ ಜೊತೆ ಕಳೆದ ಸುಂದರವಾದ ಕ್ಷಣಗಳು ಖಾಕಿ ನನಗೆ ಎಂದಿಗೂ ಮರೆಯಲು ಬಿಡುವುದಿಲ್ಲ. ಪೊಲೀಸ್ ಅಧಿಕಾರಿಯ ಕೆಲಸ ದೇವರಿಗೆ ಹತ್ತಿರವಾದ ಕೆಲಸ ಎಂದು ನಾನು ನಂಬಿದ್ದೇನೆ. ಹೆಚ್ಚು ಒತ್ತಡ ಇರುವ ಕೆಲಸಗಳು ತನ್ನದೇ ಆದ ಕಡಿಮೆ ಸಮಯದಲ್ಲಿ ಬರುತ್ತದೆ ಎಂದರು. ಅಣ್ಣಾಮಲೈ ರಾಜಕೀಯಕ್ಕೆ ಎಂಬ ಸುದ್ಧಿಗೆ ಪ್ರತಿಕ್ರಿಯಿಸಿದ ಅವರು ಸದ್ಯ ನಾನು ಯಾವ ರಾಜಕೀಯಕ್ಕೂ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!