ರಾಜಕೀಯ ನಿವೃತ್ತಿ ಘೋಷಿಸಿದ ಜಿ.ಟಿ. ದೇವೇಗೌಡ
ಮೈಸೂರು: ಜೆಡಿಎಸ್ ನಾಯಕ, ಮಾಜಿ ಸಚಿವ ಜಿ.ಟಿ.ದೇವೇಗೌಡ ಇಂದು ಮೈಸೂರಿನಲ್ಲಿ ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಪ್ರಸ್ತುತ ರಾಜಕಾರಣದ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಜಿಟಿಡಿ, ರಾಜಕೀಯ ಸಾಕು ಎಂದಿದ್ಧಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, “ನಾನು ಹಿರಿಯರ ಜೊತೆ ರಾಜಕೀಯ ಮಾಡಿದ್ದೇನೆ. 50 ವರ್ಷಗಳಿಂದ ರಾಜಕಾರಣದಲ್ಲಿ ಇದ್ದೇನೆ. ಇವತ್ತಿನ ಪರಿಸ್ಥಿತಿಯಲ್ಲಿ ರಾಜಕಾರಣ ಸಾಧ್ಯವಿಲ್ಲ. ನಾನು ಮಂತ್ರಿ ಆಗಿ ಆಯ್ತು, ರಾಜಕೀಯ ಸಾಕು. ನಾನು ಸಾಕಷ್ಟು ನೊಂದಿದ್ದೇನೆ. ಹೀಗಾಗಿ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದೇನೆ,” ಎಂದು ಜಿ.ಟಿ.ದೇವೇಗೌಡ ಹೇಳಿದ್ದಾರೆ.
ನಾನು ಯಾರ ಹಂಗಿನಲ್ಲೂ ಬದುಕಿಲ್ಲ. ನನಗೆ ಯಾರು ರಾಜಕೀಯ ಗುರುಗಳಿಲ್ಲ. ಕುಮಾರಸ್ವಾಮಿ, ದೇವೇಗೌಡ, ಸಿದ್ದರಾಮಯ್ಯ ಯಾರಿಂದಲೂ ಒಂದು ಪೈಸೆ ಸಹಾಯವಾಗಿಲ್ಲ-ಜಿಟಿಡಿ ಬೇಸರ
ಇನ್ನು ರಾಜಕೀಯದಲ್ಲಿ ಮುಂದುವರೆಯಲ್ಲ ಎಂದರು. “ಮೊದಲು 6 ತಿಂಗಳು, ಈಗ 12 ತಿಂಗಳು ಅಧಿಕಾರ ಕೊಟ್ಟಿದ್ದರು. ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ ನಂತರ ಸರ್ಕಾರದಲ್ಲಿ ಏನಾಯ್ತು? ಈಗ ಹೇಳುವುದು ಸರಿಯಲ್ಲ. ನನ್ನ ನೋವು ಆ ದೇವರಿಗೆ ಮಾತ್ರ ಗೊತ್ತು,” ಎಂದು ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು.
|
|