ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ – ಸದಾನಂದ ಗೌಡರಿಗೆ ಮನವಿ
ಉಡುಪಿ -ಕೇಂದ್ರ ಸರಕಾರದ ಆರ್ಥಿಕ ನೀತಿಯಲ್ಲಿ ಸಹಕಾರ ಸಂಘಗಳು ಎದುರಿಸುತ್ತಿರುವ ಆದಾಯ ತೆರಿಗೆ 80 ಪಿ (2) ಹಾಗೂ ಸೇವಾ ತೆರಿಗೆಗಳ ಮೂಲಕ ಸಹಕಾರ ಸಂಘಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಕೇಂದ್ರ ವಿತ್ತ ಸಚಿವರಾದ ನಿರ್ಮಲ ಸೀತಾರಾಮನ್ ರವರಿಗೆ ಕೇಂದ್ರ ರಸಗೊಬ್ಬರ ಖಾತೆ ಸಚಿವರಾದ ಸದಾನಂದ ಗೌಡರ ಮೂಲಕ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ , ದ.ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ , ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರುಗಳಾದ ಬೆಳಪು ದೇವಿ ಪ್ರಸಾದ್ ಶೆಟ್ಟಿ , ಅಶೋಕ್ ಕುಮಾರ್ ಶೆಟ್ಟಿ , ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರುಗಳಾದ ಎಚ್.ಗಂಗಾಧರ ಶೆಟ್ಟಿ, ಶ್ರೀಧರ್ ಪಿ. ಎಸ್, ಮನೋಜ್ ಕರ್ಕೇರ ,ಕಾಪು ವಿದಾನ ಸಭಾ ಶಾಸಕರಾದ ಲಾಲಾಜಿ.ಆರ್. ಮೆಂಡನ್, ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಶೆಟ್ಟಿ, ಜಿಲ್ಲಾ ಮುಖಂಡರಾದ ಉದಯಕುಮಾರ್ ಶೆಟ್ಟಿ , ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ಪುರುಷೋತ್ತಮ ಎಸ್.ಪಿ) ಹಾಗೂ ಯೂನಿಯನ್ ನಿರ್ದೇಶಕರುಗಳು ಉಪಸ್ಥಿತರಿದ್ದರು.