ಗಾಂಜಾ ಮಾರಾಟ ಜಾಲದ ಪ್ರಮುಖ ಆರೋಪಿಯ ಬಂಧನ

ಮಂಗಳೂರು: ಗಾಂಜಾ ಮಾರಾಟ ಜಾಲದ ಪ್ರಮುಖ ಆರೋಪಿಯಾದ ರಹೀಂ ಯಾನೆ ಗೂಡ್ಸ್ ರಹೀಂ ಯಾನೆ ಕಂಡಿ ರಹೀಂನನ್ನ ಪೊಲೀಸರು ಬಂಧಿಸಿದ್ದಾರೆ.

ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ  ಪೊಲೀಸರ ಕಾರ್ಯಾಚರಣೆಯಿಂದಾಗಿ ಆರೋಪಿಯ ಬಂಧನ. 8-7-2019 ರಂದು ಮಂಗಳೂರು ನಗರದ ಪಾಂಡೇಶ್ವರ ಶ್ರೀನಿವಾಸ್ ಕಾಲೇಜಿನ ಪಕ್ಕದಲ್ಲಿರುವ ಶ್ರೀರಾಂ ಗ್ಯಾರೇಜ್ ಬಳಿ  ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತಿದ್ದ ರಹೀಂ ಎಂಬಾತನಿಂದ ೧ ಕೆ.ಜಿ 100 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಆಕ್ಟಿವಾ ಹೋಂಡಾ, ಮೊಬೈಲ್ ಪೋನ್ ಹಾಗೂ ಡಿಜಿಟಲ್ ತೂಕ ಮಾಪನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈಗಾಗಲೇ ಈತನ ವಿರುದ್ಧ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ ಒಟ್ಟು 11 ಗಾಂಜಾ ಪ್ರಕರಣಗಳು ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!