ಪುತ್ತೂರು ಜೋಡಿ ಕೊಲೆ ಆರೋಪಿ ಬಂಧನ
ಪುತ್ತೂರು- ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಕುರಿಯ ಎಂಬಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು ಪ್ರಕರಣ ದಾಖಲಾದ 24 ಗಂಟೆಯಲ್ಲಿ ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಘಟನೆಯ ವಿವರ – ನವೆಂಬರ್ 17 ರಂದು ರಾತ್ರಿ ಸುಮಾರು 11.00 ಗಂಟೆಗೆ ಆರೋಪಿ ಪುತ್ತೂರು ಕುರಿಯ ಗ್ರಾಮದ ಕಟ್ಟತ್ತಾರು ನಿವಾಸಿ ಕರೀಂ ಖಾನ್ ( 29 ವರ್ಷ) ಕಳ್ಳತನ ಮಾಡುವ ಉದ್ದೇಶದಿಂದ ಕೊಲೆಯಾದ ಮನೆಯ ಗೋಡೆ ಮತ್ತು ಹಂಚಿನ ನಡುವೆ ಒಳ ಪ್ರವೇಶಿಸಿದ್ದು ಕಳ್ಳತನ ನಡೆಸುವ ವೇಳೆ ಮನೆಯ ಸದಸ್ಯರು ಎಚ್ಚರಗೊಂಡಿರುತ್ತಾರೆ. ಆರೋಪಿಯು ಮನೆಯ ಸದಸ್ಯರಿಗೆ ಪರಿಚಿತನಾಗಿದ್ದು ತಾನು ಸಿಕ್ಕಿಹಾಕಿಕೊಳ್ಳುತ್ತೇನೆ ಎಂಬ ಭಯದಿಂದ ಹಾಗೂ ಈ ಹಿಂದೆ ಮೃತ ಶೇಕ್ ಕೊಗ್ಗು ಸಾಹೇಬ್ ರವರೊಂದಿಗೆ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ನಡೆದ ಮನಸ್ತಾಪದ ದ್ವೇಷ ದಿಂದ ಅಡುಗೆ ಕೋಣೆಯಲ್ಲಿದ್ದ ಕತ್ತಿಯಿಂದ ಮನೆಯಲ್ಲಿದ್ದ ಶೇಕ್ ಕೊಗ್ಗು ಸಾಹೇಬ್ ( 70 ವರ್ಷ), ಶಾಮಿಯಾ ಭಾನು (16 ವರ್ಷ) ಕಡಿದು ಕೊಲೆಗೈದಿರುತ್ತಾನೆ ಈ ಸಮಯದಲ್ಲಿ ಖತೀಜಾಬಿ (65 ವರ್ಷ) ಎಂಬವರಿಗೆ ಗಂಭೀರ ಹಲ್ಲೆ ನಡೆಸಿದ್ದು. ಆ ಬಳಿಕ ಮನೆಯಲ್ಲಿದ್ದ ಸುಮಾರು 30 ಗ್ರಾಂ ತೂಕದ ಚಿನ್ನಾಭರಣ ಹಾಗೂ 6,000 ನಗದನ್ನು ಕಳ್ಳತನ ನಡೆಸಿ ಮನೆಯ ಹಿಂಬಾಗಿಲಿನ ಮೂಲಕ ತೆರಳಿರುತ್ತಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪುತ್ತೂರು ಗ್ರಾಮಾಂತರ ಪೊಲೀಸರು, ಕುರಿಯ ಗ್ರಾದ ಬೀಟ್ ಸಿಬ್ಬಂದಿ ಭೀಮ್ ಶೇನ್ ರವರು ನೀಡಿದ ಸುಳಿವಿನ ಅಧಾರದಲ್ಲಿ ಆರೋಪಿಯನ್ನು ನವೆಂಬರ್ 19 ರಂದು ಬಂಧಿಸಿ. ಆರೋಪಿಯ ಕೈಗೆ ಕೃತ್ಯ ನಡೆಸುವ ವೇಳೆ ಉಂಟಾದ ಘರ್ಷಣೆಯಲ್ಲಿ ಗಾಯವಾಗಿದ್ದು, ಈ ಬಗ್ಗೆ ಚಿಕಿತ್ಸೆ ನೀಡಲಾಗಿದ್ದು ಹೆಚ್ಚಿನ ತನಿಖೆ ಪ್ರಗತಿಯಲ್ಲಿದ್ದೆ