ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಗೂಂಡೂರಾವ್
ಈ ಬಗ್ಗೆ ಟ್ವೀಟ್ ಮಾಡಿರುವ ದಿನೇಶ್, ಇದೊಂದು ಅಪವಿತ್ರ ಕಾರ್ಯಕ್ರಮವಾಗಿದೆ. ಹೀಗಾಗಿ ನಾನು ಈ ಕಾರ್ಯಕ್ರಮಕ್ಕೆ ಹೋಗುವುದನ್ನು ನಿರಾಕರಿಸುತ್ತೇನೆ. ಹಾಗೆಯೇ ಪಕ್ಷದ ನಾಯಕರೂ ಕೂಡ ಭಾಗವಹಿಸಬೇಡಿ ಎಂದು ಹೇಳಿದ್ದಾರೆ.
ಟ್ವೀಟ್ ನಲ್ಲೇನಿದೆ..?
ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ ಬಿಎಸ್ವೈ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಅಸಂವಿಧಾನಿಕ ಮತ್ತು ಅನೈತಿಕ. ಇದು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ. ಈ ಅಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸುತ್ತೇನೆ, ಪಕ್ಷದ ಎಲ್ಲಾ ನಾಯಕರುಗಳಿಗೆ ಭಾಗವಹಿಸದಂತೆ ಸೂಚನೆ ನೀಡುತ್ತೇನೆ ಎಂದು ಬರೆದುಕೊಳ್ಳುವ ಮೂಲಕ ಬಿಎಸ್ವೈಗೆ ಟ್ಯಾಗ್ ಮಾಡಿದ್ದಾರೆ.
ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಅಸಂವಿಧಾನಿಕ ಮತ್ತು ಅನೈತಿಕ. ಇದು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ.
ಈ ಅಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸುತ್ತೇನೆ, ಪಕ್ಷದ ಎಲ್ಲಾ ನಾಯಕರುಗಳಿಗೆ ಭಾಗವಹಿಸದಂತೆ ಸೂಚನೆ ನೀಡುತ್ತೇನೆ. ಸ್ಪೀಕರ್ ರಮೇಶ್ ಕುಮಾರ್ ಅವರು ರಮೇಶ್ ಜಾರಕಿಹೊಳಿ, ಮಹೇಶ್ ಕುಮುಟಳ್ಳಿ ಹಾಗೂ ಆರ್ ಶಂಕರ್ ಅವರನ್ನು ಅನರ್ಹಗೊಳಿಸಿದ್ದರು. ಈ ಮೂಲಕ ಉಳಿದ ಅತೃಪ್ತರಿಗೆ ಶಾಕ್ ನೀಡಿದ್ದರು. ಈ ಮೂವರನ್ನು ಅನರ್ಹಗೊಳಿಸುವ ಮೂಲಕ ಉಳಿದ ಶಾಸಕರು ಇದರಿಂದ ಭಯಗೊಂಡು ಮತ್ತೆ ತಮ್ಮ ಸ್ಥಾನಕ್ಕೆ ಹಿಂದಿರುಗುತ್ತಾರೆ.