ವಲಸೆ ಬಂದವರಿಗೆ ಪಶ್ಚಿಮ ಬಂಗಾಳದಲ್ಲೇ ಆಶ್ರಯ ನೀಡಿ:ಪೇಜಾವರ ಶ್ರೀ

ರಾಯಚೂರು: ಬಾಂಗ್ಲಾದಿಂದ ವಲಸೆ ಬಂದವರಿಗೆ ಅನ್ಯ ರಾಜ್ಯಗಳಲ್ಲಿ ಆಶ್ರಯ ನೀಡದೇ ಪಶ್ಚಿಮ ಬಂಗಾಳದಲ್ಲೇ ಇರುವಂತೆ ನಿಯಂತ್ರಿಸಬೇಕಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.

ರಾಯಚೂರು ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಸುಧಾಮಹಾಮಂಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದೊಂದಿಗೆ ಮಾತನಾಡಿದರು.

ಪೌರತ್ವ ಕಾಯ್ದೆ ಜಾರಿಗೆ ಬಂದಿರುವುದು ಅಕ್ರಮ ವಲಸಿಗರನ್ನು ಹೊರಹಾಕುವ ಉದ್ದೇಶಕ್ಕಾಗಿ.‌ ಅನೇಕ ವರ್ಷಗಳಿಂದ‌ ದೇಶದ ವಿವಿಧೆಡೆ ವಾಸಿಸುತ್ತಿರುವ ಬಾಂಗ್ಲಾ ವಲಸಿಗರಿಗೆ ನೂತನ ಕಾಯ್ದೆ ಅನುಕೂಲ ಮಾಡಿಕೊಟ್ಟಿದೆ. ಮುಸ್ಲಿಮರನ್ನು ಹೊರಹಾಕಲಾಗುತ್ತಿದೆ ಎನ್ನುವ ಆತಂಕವನ್ನು ಹರಡುತ್ತಿರುವುದು ಸರಿಯಲ್ಲ ಎಂದರು.

ಈಶಾನ್ಯ ರಾಜ್ಯಗಳ ಕೆಲವು ನಿವಾಸಿಗಳ ಅಸ್ತಿತ್ವಕ್ಕೆ ಧಕ್ಕೆ ಬರುವ ಆತಂಕವಿದ್ದು, ಅದಕ್ಕಾಗಿ ಅಲ್ಲಿ ಹೋರಾಟ ನಡೆಯುತ್ತಿದೆ. ಕೇಂದ್ರವು ಸೇನೆ ಬಳಸಿ ಪರಿಸ್ಥಿತಿ ನಿಯಂತ್ರಿಸುವ ಬದಲು ಮನವರಿಕೆ ಮಾಡಿಕೊಟ್ಟು ಶಾಂತಿ ಪಾಲಿಸಬೇಕು ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!