ರಾಜ್ಯಪಾಲರಿಂದ ಮೈತ್ರಿ ಸರ್ಕಾರ ಉರುಳಿಸಲು ಯತ್ನ; ಮಾಜಿ ಸಚಿವ ಸೊರಕೆ
ಉಡುಪಿ : ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲು ಹೊರಟ ಬಿಜೆಪಿ ವಿರೋಧ ಪಕ್ಷವಾಗಿ ಕೆಲಸ ಮಾಡುವುದನ್ನು ಬಿಟ್ಟು ವಾಮ ಮಾರ್ಗದ ಮೂಲಕ ಸರ್ಕಾರವನ್ನು ಕೆಡವಿ ಆಡಳಿತ ನೆಡಸಬೇಕೆಂಬ ಹುನ್ನಾರ ನಡೆಸುತ್ತಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಧಾನಿ ನರೇಂದ್ರ ಮೋದಿ ಅವರು ಇದಕ್ಕೆ ಬೆಂಬಲವಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಇಂದು ಅಜ್ಜರಕಾಡು ಹುತಾತ್ಮರ ಸ್ಮಾರಕದ ಎದುರು ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.
ಬಿಜೆಪಿಯು ಅನೇಕ ರೀತಿಯ ಆಮಿಷ ಒಡ್ಡುತ್ತ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಖರೀದಿ ಮಾಡುವ ಕುದುರೆ ವ್ಯಾಪರಕ್ಕೆ ಇಳಿದಿದ್ದಾರೆ. ಪ್ರತಿಯೊಬ್ಬ ಶಾಸಕರಿಗೂ ವಿಶೇಷ ವಿಮಾನ ಬುಕ್ ಮಾಡಿ ರೆಸಾಟ್ ರಾಜಕೀಯ ನಡೆಸುತ್ತಾ ಕರ್ನಾಟಕ ಜನತೆಗೆ ಮಂಕುಬೂದಿ ಎರಚುತ್ತಿದ್ದಾರೆ. ಈಗಾಗಲೇ ಸಮ್ಮಿಸ್ರ ಸರ್ಕಾರ ಕಳೆದ ಒಂದು ವರ್ಷದಿಂದ ಒಳ್ಳೆಯ ಆಡಳಿತವನ್ನು ನೀಡುತ್ತಿದೆ.
ರೈತರ 49 ಸಾವಿರ ಕೋಟಿ ಸಾಲಮನ್ನಾಕ್ಕೆ ಚಾಲನೆ ಕೊಟ್ಟಿದೆ. ಇದನ್ನು ಸಹಿಸದ ಬಿಜೆಪಿಯವರು ಸರ್ಕಾರವನ್ನು ಅಸ್ಥಿರಗೊಳಿಸಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಮೈತ್ರಿ ಸರ್ಕಾರಕ್ಕೆ ಯಾವುದೇ ಅಡ್ಡಿ ಆಗಲ್ಲ.ಸ್ವೀಕರನ್ನು ಟಾರ್ಗೆಟ್ ಮಾಡುವ ಕೆಲಸ ಬಿಜೆಪಿ ಮಾಡುತ್ತಿದೆ. ಮಾತ್ರವಲ್ಲದೇ ರಾಜ್ಯಪಾಲರು ಸಹ ಮೈತ್ರಿ ಸರ್ಕಾರ ಉರುಳಿಸುವ ರೀತಿ ವರ್ತಿಸುತ್ತಿದ್ದಾರೆ ಎಂದು ಸೊರಕೆ ಆರೋಪಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಯದರ್ಶಿ ನರಸಿಂಹಮೂರ್ತಿ,ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಗೀತಾ ವಾಗ್ಲೆ , ಹರೀಶ್ ಕಿಣಿ, ಪ್ರಖ್ಯಾತ್ ಶೆಟ್ಟಿ, ಸರಳಾ ಕಾಂಚನ್, ಸರಸು ಡಿ. ಬಂಗೇರ, ಸುನೀತಾ ಶೆಟ್ಟಿ, ಪ್ರಶಾಂತ್ ಜತ್ತನ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ವಿಶ್ವಾಸ್ ಅಮೀನ್, ಕಿರಣ್ ಕುಮಾರ್ ಉದ್ಯಾವರ, ಸುನಿಲ್ ಬಂಗೇರ, ಕೇಶವ ಕೋಟ್ಯಾನ್, ರೋಶನಿ ಒಲಿವೆರಾ, ಉದ್ಯಾವರ ನಾಗೇಶ್ ಕುಮಾರ್, ಮತ್ತಿತರರು ಪ್ರತಿಭಟನೆಯಲ್ಲಿ ಉಪಸ್ಥಿರಿದ್ದರು.