ಔರಾದ್ಕರ್ ವರದಿ ವಾರದೊಳಗೆ ಸುತ್ತೋಲೆ:ಬೊಮ್ಮಯ್

ಉಡುಪಿ – ಉಡುಪಿ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿ ಉಡುಪಿಗೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಯ್ ಅವರಿಗೆ ಜಿಲ್ಲಾಡಳಿತದ ವತಿಯಿಂದ ಸ್ವಾಗತ ನೀಡಲಾಯಿತು.ಈ ಸಂದರ್ಭ ಮಾಧ್ಯಮದವರ ಪ್ರಶ್ನೆ ಗೆ ಉತ್ತರಿಸಿದ ಗೃಹ ಸಚಿವರು, ಪೊಲೀಸರ ವೇತನ ಪರಿಷ್ಕರಣೆ ವಿಚಾರವಾಗಿ ಕೆಲ ವಿಷಯಗಳನ್ನು ಹಂಚಿಕೊಂಡರು. “ಖಂಡಿತವಾಗಿಯೂ ಔರಾದ್ಕರ್ ವರದಿ ಜಾರಿಯಾಗುತ್ತದೆ. ಔರಾದ್ಕರ್ ವರದಿಗೆ ಎರಡು ಹಂತದಲ್ಲಿ ಸಚಿವ ಸಂಪುಟ ಒಪ್ಪಿಗೆಯನ್ನೂ ಕೊಟ್ಟಿದೆ.

ಆದರೆ ಜೈಲು ಸಿಬ್ಬಂದಿ ಮತ್ತು ಅಗ್ನಿ ಶಾಮಕದಳ ಬಿಟ್ಟು ಹೋಗಿತ್ತು. ನಮ್ಮ ಕ್ಯಾಬಿನೆಟ್ ನಲ್ಲಿ ಅವಕ್ಕೂ ಒಪ್ಪಿಗೆ ಕೊಟ್ಟಿದ್ದೇವೆ. ಆರ್ಥಿಕ‌ ಇಲಾಖೆಯಿಂದ ಕೆಲವು ಸ್ಪಷ್ಟನೆ ಕೇಳಿದ್ದೇವೆ. ಇನ್ನೊಂದು ವಾರದೊಳಗೆ ಸ್ಪಷ್ಟವಾದ ಸುತ್ತೋಲೆ ಹೊರಡಿಸುತ್ತೇವೆ” ಎಂದು ಹೇಳಿದರು.

ಸ್ವಾಮೀಜಿ ಫೋನ್ ಟ್ಯಾಪಿಂಗ್ ತಪ್ಪು – “ಎಲ್ಲಾ ಮಾಹಿತಿಗಳು ಸಿಬಿಐ ಬಳಿ ಇರುತ್ತವೆ. ಅಧಿಕೃತವಾಗಿ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಗೃಹ ಸಚಿವನಾಗಿ ಊಹಾಪೋಹಗಳಿಗೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ಎಸ್ ಐಟಿ ಮಾಡಿರುವ ತನಿಖೆಯ ಸಂಪೂರ್ಣ ವಿವರ ಸಿಬಿಐಗೆ ನೀಡಿದ್ದೇವೆ. ಆದರೆ ಅನುಮತಿ‌ ಇಲ್ಲದೆ ಯಾವುದೇ ವ್ಯಕ್ತಿಯ ಖಾಸಗಿ ಮಾತುಕತೆಯ ಕದ್ದಾಲಿಕೆ ಮಾಡುವುದು ತಪ್ಪು” ಎಂದು ಹೇಳಿದರು .

ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ – ಪ್ರಭಾವ ಬಳಸಿ ಉಪ ಚುನಾವಣೆ ಮುಂದೂಡಲಾಗಿದೆ ಎಂಬ ಕುಮಾರಸ್ವಾಮಿ ಆರೋಪದ ಕುರಿತು ಕೇಳಿದ್ದಕ್ಕೆ, “ಕುಮಾರಸ್ವಾಮಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ” ಸುಪ್ರೀಂ ಆದೇಶದ ಬಗ್ಗೆ ಹಾಗು ಚುನಾವಣಾ ಆಯೋಗದ ಬಗ್ಗೆ ಪ್ರತಿಕ್ರಿಯೆ ನೀಡಲಾರೆ ಎಂದಷ್ಟೇ ತಿಳಿಸಿದರು

Leave a Reply

Your email address will not be published. Required fields are marked *

error: Content is protected !!