ಆಟಿಡೊಂಜಿ ದಿನ : ಸಮಾಜ ಸೇವಕ ಮಹಮ್ಮದ್ ಫಾರುಕ್ ರವರಿಗೆ “ಸಾಧಕ ರತ್ನ” ಪ್ರಶಸ್ತಿ ಪ್ರದಾನ

ಮಂಜೇಶ್ವರ : ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ಜಿಲ್ಲಾ ಘಟಕ ಮತ್ತು ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪಾವಳ ಪೈವಳಿಕೆ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ವರ್ಕಾಡಿಯ ಸೈಂಟ್ ಜೋಸೆಫ್ ಶಾಲಾ ಸಭಾಂಗಣದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಜರುಗಿತು.
ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಘಟಕದ ಅಧ್ಯಕ್ಷ ಡಾ ತಲ್ಲೂರು ಶಿವರಾಮ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.
ಹಲವಾರು ಸಂಘ ಸಂಸ್ಥೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಮಹಮ್ಮದ್ ಫಾರೂಕ್ ಚಂದ್ರನಗರ ರವರಿಗೆ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳು ‘ಸಾಧಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಕುಂಬಳೆ ಸೀಮೆಯ ಪ್ರಧಾನ ದೈವ ನರ್ತಕ ಡಾ. ರವೀಶ ಪರವ ಪಡುಮಲೆ, ಕುನ್ನಿಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಫಕ್ರುದ್ದೀನ್ ಕುನ್ನಿಲ್ ಹಾಗೂ ಎಂ. ಫಿಲ್ ಪದವಿ ಪಡೆದ ಜಿಲ್ಲೆಯ ಕೊರಗ ಸಮಾಜದ ಮಹಿಳೆ ಮೀನಾಕ್ಷಿ ಬೊಡ್ಡೋಡಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!