ಅಯೋಧ್ಯೆ ಮಂದಿರ ನಿರ್ಮಾಣ ಸಮಿತಿಯಲ್ಲಿ ಪೇಜಾವರ ಶ್ರೀ
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಕುರಿತು ಕೇಂದ್ರದ ಆಡಳಿತಾರೂಢ ಎನ್’ಡಿಎ ಸರ್ಕಾರ ಮಹತ್ವದ ನಿರ್ಣಯವೊಂದನ್ನು ಕೈಗೊಂಡಿದೆ. ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸಮಿತಿಯೊಂದನ್ನು ರಚಿಸಿದ್ದು ಆ ಸಮಿತಿಯಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
ಸಮಿತಿಯಲ್ಲಿ15 ಜನರನ್ನು ನೇಮಕ ಮಾಡಲಾಗಿದ್ದು ದಕ್ಷಿಣ ಭಾರತದಿಂದ ಉಡುಪಿ ಪೇಜಾವರ ಮಠಾಧೀಶರು, ಹಾಗೂ ತಮಿಳುನಾಡಿನಿಂದ ಯುಗಪುರುಷ್ ಪರಮಾನಂದ್ ಸರಸ್ವತಿ ಅವರನ್ನು ನೇಮಕ ಮಾಡಲಾಗಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಯೋಜನೆಯೊಂದನ್ನು ಹಮ್ಮಿಕೊಳ್ಳಲಾಗಿದ್ದು, ಮಂದಿರ ನಿರ್ಮಾಣಕ್ಕೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಎಂಬ ಹೆಸರಿನ ಸಮಿತಿಯೊಂದನ್ನು ರಚನೆ ಮಾಡಲಾಗುತ್ತದೆ. ಟ್ರಸ್ಟ್ ರಚನೆ ಕುರಿತು ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿದೆ. ಸಮಿತಿ ರಚನೆಗೊಂಡ ಬಳಿಕ ಭೂಮಿಯನ್ನು ಟ್ರಸ್ಟ್’ಗೆ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.