ಅಯೋಧ್ಯೆ ತೀರ್ಪು:ಉಡುಪಿ, ದ.ಕ, ಚಿಕ್ಕಮಗಳೂರು ಶಾಲಾ ಕಾಲೇಜ್ ಗೆ ನಾಳೆ ರಜೆ

ಆಯೋಧ್ಯೆ ತೀರ್ಪು ಹಿನ್ನಲೆಯಲ್ಲಿ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನಾಳೆ(ನ.09) 10.30ಕ್ಕೆ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಆಯೋಧ್ಯೆ ತೀರ್ಪು ಪ್ರಕಟಿಸಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ರಾಜ್ಯದಲ್ಲಿ ಪೊಲೀಸರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಮುನ್ನಚ್ಚೆರಿಕಾ ಕ್ರಮವಾಗಿ ನಾಳೆ(ನ.09) ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ರಾಜ್ಯ ಸರ್ಕಾರ ತುರ್ತು ಸಭೆ ನಡೆಸಿದೆ. ಇದರ ಭಾಗವಾಗಿ ಸರ್ಕಾರ ರಾಜ್ಯದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.

ಆಯಾ ಜಿಲ್ಲಾಧಿಕಾರಿಗಳು ಮುನ್ನಚ್ಚೆರಿಕಾ ಕ್ರಮವಾಗಿ ರಜೆ ನೀಡಲಾಗಿದೆ. ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡದಲ್ಲಿ ಮುನ್ನಚ್ಚೆರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಇದರ ಭಾಗವಾಗಿ ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶ ನೀಡಿದ್ದಾರೆ.

ಚಿಕ್ಕಮಗಳೂರಿನ, ಉಡುಪಿ ಸೇರಿದಂತೆ ರಾಜ್ಯ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡಿದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ದೇವಸ್ಥಾನ, ಮಸೀದಿಗಳ ಮುಂದೆ ಪೊಲೀಸ್ ಸರ್ಪಗಾವಲು ಹಾಕಲಿದ್ದಾರೆ.

ಆಗಸ್ಟ್ 6 ರಿಂದ ಸುಪ್ರೀಂ ಕೋಟ್ ದಿನನಿತ್ಯ ವಿಚಾರಣೆಯನ್ನು ಆರಂಭ ಮಾಡಿತ್ತು. 40 ದಿನಗಳ ಕಾಲ ನಿರಂತರ ವಿಚಾರಣೆ ನಡೆಸಿದ ಸಂವಿಧಾನ ಪೀಠ ಅಕ್ಟೋಬರ್16ಕ್ಕೆ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿತ್ತು.

ಸುಪ್ರೀಂ ಕೋರ್ಟ್ ಅಯೋಧ್ಯೆ ವಿವಾದವನ್ನು ಪರಿಹಾರಿಸಿಕೊಳ್ಳಲು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಫ್‍ಎಂಐ ಕಲಿಫುಲ್ಲಾ, ಧರ್ಮಗುರು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಹಾಗೂ ಹಿರಿಯ ವಕೀಲ ಶ್ರೀರಾಮ್ ಮಂಚು ಅವರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಆದರೆ ಈ ವಿವಾದವನ್ನು ಬಗೆಹರಿಸಲು ಸಮಿತಿ ವಿಫಲವಾದ ಹಿನ್ನೆಲೆಯಲ್ಲಿ ಸಂವಿಧಾನ ಪೀಠ ದಿನನಿತ್ಯ ವಿಚಾರಣೆ ನಡೆಸಿತ್ತು

Leave a Reply

Your email address will not be published. Required fields are marked *

error: Content is protected !!