ಬೆಂಗಳೂರು: ಕೊರೊನಾ ವಾರಿಯರ್ಸ್ ಮೇಲೆ ದಾಳಿ,ಬಿಗಿ ಪೊಲೀಸ್ ಬಂದೋಬಸ್ತ್

ಬೆಂಗಳೂರು: ಕೊರೊನಾ ಸೋಂಕು ಪ್ರಕರಣಗಳು ಹೆಚ್ಚು ಕಾಣಿಸಿಕೊಂಡು ಸೀಲ್ ಡೌನ್ ಆಗಿರುವ ಪಾದರಾಯನಪುರದಲ್ಲಿ ಕೊರೊನಾ ಸೋಂಕಿತರ ಸಂಪರ್ಕ ಹೊಂದಿದ್ದ 58 ಜನರನ್ನು ಭಾನುವಾರ ಕ್ವಾರೆಂಟೈನ್ ಮಾಡುವ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಗುಡ್ಡದಹಳ್ಳಿ ಅರ್ಫತ್ ನಗರದಲ್ಲಿ 100ಕ್ಕೂ ಹೆಚ್ಚು ಸ್ಥಳೀಯರಿಂದ ಬ್ಯಾರಿಕೇಡ್‌ಗಳನ್ನು ಉರುಳಿಸಿ ಗಲಾಟೆ ಮಾಡಿದ್ದಾರೆ. ಎಲ್ಲ ಕಡೆ ಬ್ಯಾರಿಕೇಡ್ ಹಾಕಿ ನಿರ್ಬಂಧ ಹೇರಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊರಗೆ ಹೋಗೋಕೆ ಆಗ್ತಿಲ್ಲ. ಊಟ ಸಿಗುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ.

ಪಾದರಾಯನಪುರದಲ್ಲಿ ಇಲ್ಲಿಯವರೆಗೆ ಒಟ್ಟು‌18 ಕೊರೊನಾ ಸೋಂಕು ದೃಢಪಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಸೀಲ್ ಡೌನ್ ಮಾಡಲಾಗಿದೆ. ಈ ಭಾಗದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತದಲ್ಲಿ ಇದ್ದವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪ್ರತ್ಯೇಕ ಕ್ವಾರಂಟೈನ್ ಮಾಡಲಾಗುತ್ತಿದೆ

Leave a Reply

Your email address will not be published. Required fields are marked *

error: Content is protected !!