ಬೆಂಗಳೂರು: ಆಸ್ಪತ್ರೆ ಕಟ್ಟಡದಿಂದ ಜಿಗಿದು ಕೊರೋನಾ ರೋಗಿ ಆತ್ಮಹತ್ಯೆ!

ಬೆಂಗಳೂರು: ಕೊರೋನಾ ಸೋಂಕಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 50 ವರ್ಷದ ರೋಗಿ ಸಂಖ್ಯೆ 466 ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು ವಿಕ್ಟೋರಿಯಾ ಟ್ರಾಮಾ ಸೆಂಟರ್ ನಲ್ಲಿ ಘಟನೆ ನಡೆದಿದೆ.ಕಾಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿವಿ ಪುರಂ ಠಾಣೆ ಪೋಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಈ ವ್ಯಕ್ತಿ ಬೆಂಗಳೂರು ತಿಲಕ್ ನಗರ ನಿವಾಸಿಯಾಗಿದ್ದು ಅಣ್ಣನ ಮನೆಯಲ್ಲಿ ನೆಲೆಸಿದ್ದ ಎನ್ನುವುದು ತಿಳಿದು ಬಂದಿದೆ. ರೋಗಿ ಆಟೋ ಚಾಲಕನಾಗಿ ಕೆಲಸ ,ಮಾಡುತ್ತಿದ್ದ. ಈತನಿಗೆ ಕಿಡ್ನಿ ವೈಫಲ್ಯವಿದ್ದು ನಿನ್ನೆಯಷ್ಟೇ ಡಯಾಲಿಸಿಸ್ ನಡೆದಿತ್ತು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!