ಕೊರೊನಾ–19 ಭೀತಿ: ಬೆಂಗಳೂರಿನ ನರ್ಸರಿ, ಎಲ್ಕೆಜಿ, ಯುಕೆಜಿಗಳಿಗೆ ರಜೆ ಘೋಷಣೆ
ಬೆಂಗಳೂರು: ಕೊರೊನಾ ವೈರಸ್ (ಕೊರೊನಾ–19) ಭೀತಿ ಹಿನ್ನೆಲೆ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ನರ್ಸರಿ, ಎಲ್ಕೆಜಿ, ಯುಕೆಜಿಗಳಿಗೆ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ .
ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ಈ ಮೂರು ಜಿಲ್ಲೆಯ ಸರ್ಕಾರಿ, ಅನುದಾನ ಹಾಗೂ ಅನುದಾನ ರಹಿತ ಶಾಲೆಗಳ ನರ್ಸರಿ, ಎಲ್ಕೆಜಿ, ಹಾಗೂ ಯುಕೆಜಿಯ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಮುಂಜಾಗ್ರತೆ ಕ್ರಮವಾಗಿ ಮುಂದಿನ ಆದೇಶದವರೆಗೂ ರಜೆ ಘೋಷಣೆ ಮಾಡಲಾಗಿದೆ.
ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ ನರ್ಸರಿ, ಎಲ್ಕೆಜಿ, ಯುಕೆಜಿ ಶಾಲೆಗಳಿಗೆ ಸೋಮವಾರದಿಂದ ರಜೆ ಘೋಷಿಸಲಾಗಿದೆ ಎಂದು ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ