ಮಂಗಳವಾರ ರಾಷ್ಟ್ರ ವ್ಯಾಪಿ ಬ್ಯಾಂಕ್ ಮುಷ್ಕರ
ಹೈದರಾಬಾದ್: 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಹಾಗೂ ವಿವಿಧಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ನಾಳೆ ದೇಶಾದ್ಯಂತ ಬ್ಯಾಂಕ್ ನೌಕರರು ಮುಷ್ಕರ ನಡೆಸಲಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ ಮತ್ತು ಭಾರತದ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ತಿಳಿಸಿದೆ.
ಆರು ಪ್ರಮುಖ ಬೇಡಿಕೆಗಾಳಾದ –ಬ್ಯಾಂಕಿಂಗ್ ಸುಧಾರಣಾ ಕ್ರಮದ ನೆಪದಲ್ಲಿ ಬ್ಯಾಂಕ್ ಗಳ ವಿಲೀನ ತಡೆ, ಕೆಟ್ಟ ಸಾಲಗಳ ವಾಪಸಾತಿ ಖಾತರಿ, ಸುಸ್ತಿದಾರರ ವಿರುದ್ಧ ಕಠಿಣ ಕ್ರಮ – ಗ್ರಾಹಕರಿಗೆ ದಂಡದಂತಹ ಕಿರುಕುಳ ತಡೆ, ಸೇವಾ ಶುಲ್ಕ ಹೆಚ್ಚಳ ನಿಯಂತ್ರಣ, ಠೇವಣಿಗಳ ಮೇಲಿನ ಬಡ್ಡಿ ದರ ಹೆಚ್ಚಳ, ಉದ್ಯೋಗ ಭದ್ರತೆಗೆ ಆಗ್ರಹಿಸಿ ನಾಳೆ ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಮುಷ್ಕರ ನಡೆಸಲಾಗುವುದು ಎಂದು ಎಐಬಿಎ ಪ್ರಧಾನ ಕಾರ್ಯದರ್ಶಿ ವೆಂಕಟಾಚಲಂ ಅವರು ಹೇಳಿದ್ದಾರೆ.